ದಾವಣಗೆರೆ, ಜೂ.19- ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬವನ್ನು ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಶಾಮನೂರು ಟಿ. ಬಸವರಾಜ್, ವಿಪಕ್ಷ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಗಡಿಗುಡಾಳ್ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್, ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್.ಹರೀಶ್ ಬಸಾಪುರ, ಒಬಿಸಿ ಜಿಲ್ಲಾಧ್ಯಕ್ಷ ಎಂ. ಹಾಲೇಶ್, ಸೇವಾದಳ ಜಿಲ್ಲಾಧ್ಯಕ್ಷ ಡೋಲಿ ಚಂದ್ರು, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿತಾಬಾಯಿ ಮಾಲತೇಶ್, ಶುಭಮಂಗಳ, ಸ್ಮಿತಾ ಪಾಟೀಲ್, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್, ಮಂಗಳಮ್ಮ, ರಾಧಾಬಾಯಿ, ಸಂಗಮ್ಮ, ಜಯಶ್ರೀ, ಮುಖಂಡರಾದ ಅಜ್ಜಪ್ಪ ಪವಾರ್, ಬೆಳ್ಳೂಡಿ ಮಂಜುನಾಥ್, ಶಮಿ ದೇವರಹಟ್ಟಿ, ಯುವರಾಜ್, ಮೇಘರಾಜ್, ಬಸವರಾಜ್, ಪ್ರವೀಣ್, ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು