ದಾವಣಗೆರೆ, ಜೂ.22- ವಿಧಾನ ಪರಿಷತ್ ಸದಸ್ಯರ ಆಯ್ಕೆ ಹಾಗೂ ನಿಗಮ ಮಂಡಳಿಗಳ ನೇಮಕಾತಿಯಲ್ಲಿ ಉಪ್ಪಾರ ಸಮಾಜಕ್ಕೆ ಆದ್ಯತೆ ನೀಡುವಂತೆ ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರುಗಳಿಗೆ ಇಂದು ಮನವಿ ಸಲ್ಲಿಸಲಾಯಿತು.
ಉಪ್ಪಾರ ನಿಗಮಕ್ಕೆ 100 ಕೋಟಿ ಅನುದಾನ ನೀಡಬೇಕು, ಉಪ್ಪಾರ ಸಮಾಜವನ್ನು ಮುಖ್ಯವಾಹಿನಿಗೆ ತರಲು ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ವಿಷ್ಣು ಲಾತೂರ್, ಭರತ್ ಮೈಲಾರ್, ಸಿದ್ದೇಶ್ ಕುಮಾರ್, ಸುಧೀರ್ ಉಪ್ಪಾರ್ ಮತ್ತು ಇತರರು ಇದ್ದರು.