ದಾವಣಗೆರೆ, ಜೂ.23- ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವಿ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದಾವಣಗೆರೆ ಹಾಗೂ ಆಯಾ ತಾಲ್ಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ/ಚನ್ನಗಿರಿ ಮತ್ತು ಜಗಳೂರು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹರಿಹರ ಮತ್ತು ಹೊನ್ನಾಳಿ ಕಚೇರಿ ವೇಳೆಯಲ್ಲಿ ಪಡೆದು, ಅರ್ಜಿಗಳನ್ನು ಜುಲೈ 15 ರೊಳಗೆ ಸಂಬಂಧಿಸಿದ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಮೇಲ್ಕಂಡ ಕಚೇರಿಗಳನ್ನು ಸಂಪರ್ಕಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.