ಮಲೇಬೆನ್ನೂರು, ಜೂ.24- ನಾಳೆ ಗುರುವಾರ ದಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಹಿನ್ನೆಲೆಯಲ್ಲಿ ಪಟ್ಟಣದ ಪರೀಕ್ಷಾ ಕೇಂದ್ರವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೊಠಡಿ ಮೇಲ್ವಿಚಾರಕರಿಗೆ ಬುಧವಾರ ಪರೀಕ್ಷೆಯ ಅಣಕು ಪದ್ಧತಿಯನ್ನು ನಡೆಸಲಾಯಿತು.
ವಿದ್ಯಾರ್ಥಿಗಳಿಗೆ ವೈದ್ಯಾಧಿಕಾರಿ ಡಾ. ಲಕ್ಷ್ಮಿದೇವಿ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ.
ನಂತರ ದೈಹಿಕ ಶಿಕ್ಷಕರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ಮಾಡಲಾಗುವುದು ಎಂದು ಪರೀಕ್ಷಾ ಕೇಂದ್ರದ ಉಪ ಮುಖ್ಯ ಅಧೀಕ್ಷಕ ಸಿ. ಜಯಣ್ಣ ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ್ ಅವರ ನೇತೃತ್ವದಲ್ಲಿ ಪರೀಕ್ಷಾ ಕೊಠಡಿಗಳ ಸ್ಯಾನಿಟೈಸ್ ಮತ್ತು ಕೇಂದ್ರದ ಸುತ್ತಲಿನ ಜಾಗವನ್ನು ಸ್ವಚ್ಛಗೊಳಿಸಲಾಗಿದೆ.
ಮಾಸ್ಕ್ ವಿತರಣೆ : ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಮತ್ತು ಹರಿಹರ ತಾಲ್ಲೂಕು ಆಡಳಿತದ ವತಿಯಿಂದ ತಲಾ ಒಂದೊಂದು ಮಾಸ್ಕ್ಗಳನ್ನು ಉಚಿತವಾಗಿ ವಿತರಿಸಲಾಯಿತು.
ಜಿ.ಪಂ. ಮಾಜಿ ಸದಸ್ಯರೂ ಆದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್ಡಿಎಂಸಿ ಅಧ್ಯಕ್ಷ ಬೆಣ್ಣೆಹಳ್ಳಿ ಹಾಲೇಶಪ್ಪ, ಎಪಿಎಂಸಿ ಸದಸ್ಯ ಜಿ. ಮಂಜುನಾಥ ಪಟೇಲ್, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಹೆಚ್. ಹನುಮಂತಪ್ಪ, ಉಪ ಮುಖ್ಯ ಅಧೀಕ್ಷಕ ಸಿ. ಜಯಣ್ಣ ಈ ವೇಳೆ ಹಾಜರಿದ್ದರು.