ದಾವಣಗೆರೆ, ಜೂ.24- ಇಲ್ಲಿಗೆ ಸಮೀಪದ ಎಲೆಬೇತೂರು ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆಯಲ್ಲಿ ನಾಳೆ ಗುರುವಾರದಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಈ ಪ್ರೌಢಶಾಲೆಯಲ್ಲಿ 223 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಆನೆಕೊಂಡ 2, ಬಸಾಪುರ 2, ಅಮೃತ ನಗರ 1 ಎಲೆಬೇತೂರು ಸೇರಿ ಆರು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಾರೆ. 14 ಕೊಠಡಿಗಳನ್ನು ನಿಗದಿಪಡಿಸಲಾಗಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಪರೀಕ್ಷಾ ಕೊಠಡಿಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಎಸ್.ಕೆ.ಹಲಗಣ್ಣನವರ್ ತಿಳಿಸಿದ್ದಾರೆ.