ಜಗಳೂರು, ಜು. 25- ತಾಲ್ಲೂಕಿನಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕೇಂದ್ರ ಸೇರಿದಂತೆ ತಾಲ್ಲೂಕಿನ 11 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಶಿಕ್ಷಣ ಇಲಾಖೆ ಮತ್ತು ಪರೀಕ್ಷಾ ಮಂಡಳಿಯ ಮಾರ್ಗಸೂಚಿಗಳಂತೆ ಬಿಗಿ ಬಂದೋಬಸ್ತ್ನಲ್ಲಿ ನಡೆಯಿತು.
ತಾಲ್ಲೂಕಿನಲ್ಲಿ ನೋಂದಾಯಿತ 2321 ವಿದ್ಯಾರ್ಥಿ ಗಳಲ್ಲಿ 2188 ವಿದ್ಯಾರ್ಥಿಗಳು ಇಂದು ಪರೀಕ್ಷೆಗೆ ಹಾಜ ರಾದರು. 133 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಒಂದು ಕಡೆ ಪೋಷಕರು ತಮ್ಮ ಮಕ್ಕಳು ಕೋವಿಡ್-19 ಎಂಬ ಸಾಂಕ್ರಾಮಿಕ ರೋಗದ ಮಧ್ಯೆ ಪರೀಕ್ಷೆ ಹೇಗೆ? ಎಂಬ ಭಯದಿಂದ ಇದ್ದರೆ, ಮತ್ತೊಂ ದೆಡೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯನ್ನಿಟ್ಟುಕೊಂಡು ಮುಂಜಾಗ್ರತಾ ಕ್ರಮ ಕೈಗೊಂಡಿತ್ತು. ಪ್ರತಿ ವಿದ್ಯಾರ್ಥಿಯ ಆರೋಗ್ಯವನ್ನು ಆರೋಗ್ಯ ಇಲಾಖೆಯವರು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದ ಒಳಗಡೆ ಕಳುಹಿಸಲಾಯಿತು.
ಅನಾರೋಗ್ಯ ಕಂಡರೆ ಅಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು.
ಪೋಷಕರು ಗಾಬರಿ ಮತ್ತು ಆತಂಕ ಪಡಬೇಕಾ ಗಿಲ್ಲ. ಮುಕ್ತ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಧೈರ್ಯದಿಂದ ಮತ್ತು ಆತ್ಮವಿಶ್ವಾಸದಿಂದ ಬರೆಯುತ್ತಿದ್ದಾರೆ, ತಾಲ್ಲೂಕು ಆಡಳಿತ ಮತ್ತು ಸಾರ್ವ ಜನಿಕ ಶಿಕ್ಷಣ ಇಲಾಖೆಯಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಎಲ್ಲಾ ಸಿದ್ಧತೆ ಗಳನ್ನು ಮುಂಜಾಗ್ರತೆಯಾಗಿ ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ತಿಳಿಸಿದರು.