ದಾವಣಗೆರೆ, ಅ.4- ಜಿಲ್ಲೆಯಲ್ಲಿ ಭಾನುವಾರ 106 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟ ಬಗ್ಗೆ ವರದಿಯಾಗಿದೆ.
181 ಜನರು ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 1419 ಸಕ್ರಿಯ ಪ್ರಕರಣಗಳಿವೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ 16701 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 15039 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 243 ಜನರು ಸಾವನ್ನಪ್ಪಿದ್ದಾರೆ.
ದಾವಣಗೆರೆ ತಾಲ್ಲೂಕಿನಲ್ಲಿ 33, ಹರಿಹರ 29, ಜಗಳೂರು 4, ಚನ್ನಗಿರಿ 18, ಹೊನ್ನಾಳಿ 21 ಹಾಗೂ ಹೊರ ಜಿಲ್ಲೆಯ ಒಬ್ಬರಲ್ಲಿ ಇಂದು ಸೋಂಕು ಕಾಣಿಸಿಕೊಂಡಿದೆ.