ಜಗಳೂರು, ಅ.3-ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಕೂಡಲೇ ಬಿಲ್ ಪಾವತಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ತಾಲ್ಲೂಕಿನ ಕ್ಯಾಸೇನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಚಿಕ್ಕ ಉಜ್ಜಿನಿ ಗ್ರಾಮಸ್ಥರು ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ದಿಢೀರನೆ ಜಮಾಯಿಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಕೂಡಲೇ ಬಿಲ್ ಪಾವತಿಸಲು ಮನವಿ ಮಾಡಿದರು.
ಈ ವೇಳೆ ಬಿಜೆಪಿ ಒಬಿಸಿ ಮೋರ್ಚಾದ ಮುಖಂಡ ಟೈಗರ್ ಅಂಜಿನಪ್ಪ ಮಾತನಾಡಿ, ನಮಗೆ ಅಧಿಕಾರಿಗಳ ಮೇಲೆ ವೈಯಕ್ತಿಕ ದ್ವೇಷವಿಲ್ಲ. ಪಂಚಾಯಿತಿ ವ್ಯಾಪ್ತಿಯ ಅರ್ಹ ಬಡ ಫಲಾನುಭವಿಗಳಿಗೆ ನ್ಯಾಯ ಸಿಗಬೇಕು. ಅಲ್ಲದೆ ಪಂಚಾ ಯಿತಿ ಅಭಿವೃದ್ಧಿ ನಮ್ಮ ಗುರಿಯಾಗಬೇಕು. ಈ ಬಗ್ಗೆ ಸಮಸ್ಯೆ ಬಗೆಹರಿಸಿಕೊಳ್ಳಲು ಗ್ರಾಮ ಪಂಚಾಯ್ತಿಗೆ ತೆರಳಿದಾಗ ಅಲ್ಲಿನ ಸಿಬ್ಬಂದಿಗಳು ವಿನಾಕಾರಣ ಗೊಂದಲ ಸೃಷ್ಠಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ರೇಖಾ, ಕರಿಯಪ್ಪ, ಮಂಜುನಾಥಯ್ಯ, ಕೆ.ಸಿ.ಜಗದೀಶ್, ಯಶೋಧಮ್ಮ, ಮಂಜಕ್ಕ, ಬಸಮ್ಮ ಭಾಗವಹಿಸಿದ್ದರು.