ಬೇಡಿಕೆ ಈಡೇರುವವರೆಗೆ ಮುಷ್ಕರ ನಿಲ್ಲದು

ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ  ಶಿಕ್ಷಣ ಗುತ್ತಿಗೆ-ಹೊರ ಗುತ್ತಿಗೆ ನೌಕರರ ಸಂಘದ ಎಚ್ಚರಿಕೆ

ದಾವಣಗೆರೆ, ಅ.4-  ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಸೇರಿ 14 ಬೇಡಿಕೆಗಳ ಈಡೇರಿಕೆಗಾಗಿ ನಡೆಸುತ್ತಿರುವ ಮುಷ್ಕರ ವನ್ನು ಬೇಡಿಕೆಗಳನ್ನು ಈಡೇರಿ ಸುವವರೆಗೂ ಮುಂದುವರೆಸಲು ತೀರ್ಮಾನಿಸಿರುವುದಾಗಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘ ತಿಳಿಸಿದೆ.

ನಮ್ಮ ಹೋರಾಟ 11 ದಿನ ಪೂರೈಸಿದ್ದು, ಬೇಡಿಕೆ ಈಡೇರಿಸುತ್ತೇವೆ ಎಂದ ಸರ್ಕಾರ ಈಗ ಮೌನವಹಿಸಿ ಅಧಿಕಾರಿಗಳ ಮೂಲಕ ಮುಷ್ಕರ ನಿರತರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು ವಿಷಾ ದನೀಯ ಎಂದು ಸಂಘದ ಜಿಲ್ಲಾಧ್ಯಕ್ಷ ಎನ್.ಸಿ. ಹಾಲಸ್ವಾಮಿ ಹೇಳಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸಂತೋಷ್ ಕುಮಾರ್, ಸಂಘದ ಖಜಾಂಚಿ ಅಂಬರೀಶ್, ಸದಸ್ಯ ಸತೀಶ್ ಕಲಹಾಳ್ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

error: Content is protected !!