ದಾವಣಗೆರೆ, ಅ.3- ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿಂದು ಸಂಜೆ ಪ್ರತಿಭಟಿಸಿ, ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಲ್ಲದೇ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಜಯದೇವ ವೃತ್ತದಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮೇಣದ ಬೆಳಕು ಮೂಡಿಸಿ ಮೃತಪಟ್ಟ ಯುವತಿಯ ಆತ್ಮಕ್ಕೆ ಶಾಂತಿ ಕೋರಲಾಯಿತು. ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಹಾಗೂ ಪೊಲೀಸರ ದೌರ್ಜನ್ಯವನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ನಗರ ಪಾಲಿಕೆ ಸದಸ್ಯ ದೇವರಮನೆ ಶಿವಕುಮಾರ್, ಮುಖಂಡರಾದ ಕೆ.ಜಿ. ಶಿವಕುಮಾರ್, ಡಿ. ಬಸವರಾಜ್, ಎಸ್. ಮಲ್ಲಿಕಾರ್ಜುನ, ಮಹಿಳಾ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಜಾಧವ್, ಚಮನ್ ಸಾಬ್, ಸೈಯದ್ ಖಾಲೀದ್, ಸೈಯದ್ ಚಾರ್ಲಿ, ಮುಜಾಹಿದ್, ಮೈನುದ್ದೀನ್, ರವಿಸ್ವಾಮಿ ಮತ್ತಿತರರು ಭಾಗವಹಿಸಿದ್ದರು.