ತಹಶೀಲ್ದಾರ್ ಹತ್ಯೆ ಖಂಡಿಸಿ ನೌಕರರ ಪ್ರತಿಭಟನೆ

ಜಗಳೂರು, ಜು. 11- ತಾಲ್ಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ವತಿಯಿಂದ ಬಂಗಾರಪೇಟೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಕೆ.ಬಿ. ಚಂದ್ರಮೌಳೇಶ್ವರ ಹತ್ಯೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ್ ಧನಪಾಲ್ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ಜಗಳೂರು ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜ್ಜಯ್ಯ ನಾಡಿಗರ್ ಮಾತನಾಡಿ, ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಕೆ.ಬಿ. ಚಂದ್ರಮೌಳೇಶ್ವರ ಅವರು ಕಾರ್ಯ ನಿರತರಾಗಿದ್ದ ಸಂದರ್ಭದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಕೃತ್ಯವನ್ನು ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತೀವ್ರವಾಗಿ ಖಂಡಿಸುತ್ತದೆ ಎಂದರು.

ನಂತರ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ ಮಾತನಾಡಿ, ಇಂಥ ಕೃತ್ಯಗಳು ಮರುಕಳಿಸ ದಂತೆ ಕಠಿಣ ಕಾನೂನನ್ನು ರಾಜ್ಯ ಸರ್ಕಾರ ರೂಪಿಸಬೇಕು. ಆರೋಪಿ ಯನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾ ಗೌರವಾಧ್ಯಕ್ಷ  ದುರುಗೇಶ್  ಮಾತನಾಡಿ, ಈ ಕೂಡಲೇ  ಸರ್ಕಾರ ಮೃತರ ಕುಟುಂಬಕ್ಕೆ ಕನಿಷ್ಠ ಮಟ್ಟದ ಪರಿಹಾರವನ್ನು ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಯಿಂದ ಉಪ ತಹಶೀಲ್ದಾರ್ ಗಳಾದ ಗಂಗಾಧ ರಯ್ಯ, ರಾಮಚಂದ್ರಪ್ಪ ಕಂದಾಯ ಇಲಾ ಖೆಯ ಕಸಬಾ ಹೋಬಳಿ ಆರ್.ಐ. ಕುಬೇರ ನಾಯ್ಕ್, ಶ್ರೀನಿವಾಸ, ಧನಂಜಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ. ನಾಗರಾಜ್, ಕಾಂತ ರಾಜ್ ಹಾಗೂ ಸರ್ಕಾರಿ ನೌಕರ ಸಂಘದಿಂದ  ಸರ್ಕಾರಿ ನೌಕರ ಸಂಘದ ಕಾರ್ಯದರ್ಶಿ ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ವೆಂಕಟೇಶಮೂರ್ತಿ, ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿ ಶ್ವೇತಾ, ವಲಯ ಅರಣ್ಯಾಧಿಕಾರಿ ಪ್ರಕಾಶ್, ಬೆಸ್ಕಾಂ ಇಲಾಖೆಯ ಎಇಇ  ಪ್ರವೀಣ್ ಕುಮಾರ್, ಉಪನೋಂದಣಾಧಿಕಾರಿ ಹೇಮೇಶ್, ಲೋಕೋಪಯೋಗಿ ಇಲಾಖೆಯ ಎಇಇ ರುದ್ರಪ್ಪ ವೆಂಕಟೇಶ್ ಮೂರ್ತಿ ಮತ್ತಿತರರು ಭಾಗವಹಿಸಿದ್ದರು.

error: Content is protected !!