ಹರಪನಹಳ್ಳಿ, ಜು.16- ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ್ ಸೇರಿದಂತೆ ಮೂವರಿಗೆ ಸೋಂಕು ದೃಢಪಟ್ಟಿದೆ.
ಶಾಸಕರಿಗೆ ಸೋಂಕು ದೃಢಪಟ್ಟಿದ್ದು, ಅವರನ್ನು ಐಸೋಲೇಷನ್‍ನಲ್ಲಿ ಇರಿಸಲಾಗಿದೆ. ಆರೋಗ್ಯದಲ್ಲಿ ಯಾವುದೇ ರೀತಿ ಏರುಪೇರು ಕಂಡುಬಂದಿಲ್ಲ. ಮುಂಜಾಗ್ರತೆಗಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಪಟ್ಟಣದ ಆಚಾರ್ಯ ಬಡಾವಣೆಯಲ್ಲಿರುವ ಪಿ.ಟಿ.ಪರಮೇಶ್ವರನಾಯ್ಕ್ ಅವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪ್ರದೇಶವನ್ನು ಕಂಟೈನ್‍ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಪುರಸಭೆ ಸಿಬ್ಬಂದಿ ಪ್ರದೇಶವನ್ನು ಸ್ಯಾನಿಟೈಸ್ ಮಾಡುತ್ತಿದ್ದಾರೆ.
ಪಟ್ಟಣದ ಪಠಾಣಗೇರಿಯ ವ್ಯಕ್ತಿಗೆ (18) ಕೊರೊನಾ
ಸೋಂಕು ದೃಢಪಟ್ಟಿದ್ದು ಅವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಪಟ್ಟಣದಲ್ಲಿ ಬೀದಿ ಬದಿ ಹಣ್ಣು ತರಕಾರಿ ವ್ಯಾಪಾರಿಗಳ ಗಂಟಲ ದ್ರವ ಪರೀಕ್ಷೆಗೆ ಕಳಿಸಲಾಗಿತ್ತು. ಅದರಲ್ಲಿ ಈ ವ್ಯಕ್ತಿಯೂ ಒಬ್ಬರಾಗಿದ್ದರು. ಇನ್ನೊಬ್ಬ ವ್ಯಕ್ತಿ (32) ತಾಲ್ಲೂಕಿನ ಕೊಮಾರನಹಳ್ಳಿಗೆ ಬೆಂಗಳೂರಿನಿಂದ ಆಗಮಿಸಿದ್ದು, ಅವರ ಗಂಟಲ ದ್ರವ ಪರೀಕ್ಷೆಯಿಂದ ಸೋಂಕು ದೃಢಪಟ್ಟಿದೆ.