ದಾವಣಗೆರೆ, ಅ. 23 – ಜಿಲ್ಲಾಡಳಿತದ ಸಹಯೋಗದೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮನ 242ನೇ ಜಯಂತ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಪದ್ಮಾ ಬಸವಂತಪ್ಪ ಅವರು ಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಪಂಚಮಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷ ಬಿ.ಸಿ. ಉಮಾಪತಿ, ಉಪಾಧ್ಯಕ್ಷರಾದ ಬಿ.ಲೋಕೇಶ್, ಎಂ ದೊಡ್ಡಪ್ಪ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ರಶ್ಮಿ, ನಗರ ಘಟಕದ ಅಧ್ಯಕ್ಷರಾದ ವಾಣಿ, ಪದಾಧಿಕಾರಿಗಳಾದ ಸುಷ್ಮಾ ಪಾಟೀಲ್, ವೀಣಾ ಕೊಟ್ರೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.