ಹರಪನಹಳ್ಳಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಎಂ.ಸಿದ್ದರಾಜು
ಹರಪನಹಳ್ಳಿ, ಅ.23- ಮಹನೀಯರ ಜಯಂತಿಗಳು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಾಗದೆ, ಸರ್ವ ಜನಾಂಗದವರು ಜಯಂತಿಗಳಲ್ಲಿ ಭಾಗವಹಿಸುವಂತಾಗಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಎಂ.ಸಿದ್ದರಾಜು ಹೇಳಿದರು.
ಪಟ್ಟಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಛೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿ ಅಂಗವಾಗಿ ಇಂದು ಏರ್ಪಾಡಾಗಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ನಾಡಿನ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ವೀರ ಮಹಿಳೆಯಾಗಿದ್ದು, ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳ ಬೇಕು ಎಂದು ಅವರು ಕರೆ ನೀಡಿದರು.
ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಕೋರಿಶೆಟ್ಟಿ ಉಚ್ಚೆಂಗೆಪ್ಪ ಮಾತನಾಡಿ, ಕನ್ನಡ ನಾಡಿನ ವೀರ ಮಹಿಳೆಯರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅಗ್ರಪಂಕ್ತಿಗೆ ಸೇರಿದ್ದು, ದಾಸ್ಯದ ವಿರುದ್ಧ ಸಮರ ಸಾರಿದ ವೀರ ಕನ್ನಡತಿ. ಸ್ವಾತಂತ್ರ್ಯದ ಕಿಚ್ಚನ್ನು ಹೆಚ್ಚಿಸಿದ್ದು, ಸಾಧನೆಯ ಹಾದಿಯಲ್ಲಿ ತ್ಯಾಗಮಯಿಯಾದ ಅವರನ್ನು ಇಂದು ಎಲ್ಲರೂ ಸ್ಮರಣೆ ಮಾಡುವ ಅಗತ್ಯವಿದೆ. ದೇಶಭಕ್ತಿ, ಸ್ವಾಭಿಮಾನ ಹಾಗೂ ಕಲಿ ತನವನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸುವ ಪಣ ತೋಡಲು ಸುದಿನವಾಗಿದೆ ಎಂದರು.
ಇಂಜಿನಿಯರ್ ಸಿ.ಯು. ಬಸವರಾಜ್, ಲೋಕೇಶ್, ಮಹೇಶ್ವರ, ಶಿವಾನಂದಪ್ಪ, ಬೈಲಪ್ಪ, ರಾಮಪ್ಪ, ಪ್ರಕಾಶ್, ಸ್ವಾಮಿ ಸೇರಿದಂತೆ ಇತರರು ಇದ್ದರು.