ಜಗಳೂರು, ಅ.27- ತಂಬಾಕು ನಿಯಂ ತ್ರಣ ತನಿಖಾ ದಳವು ಪಟ್ಟಣದ ವಿವಿಧ ಅಂಗಡಿ ಗಳ ಮೇಲೆ ದಾಳಿ ನಡೆಸಿ, ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ದಂಡ ವಿಧಿಸಲಾಯಿತು.
ಜಿಲ್ಲಾ ಆಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆ, ಪಟ್ಟಣ ಪಂಚಾಯತ್, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
ಒಟ್ಟು 37 ಪ್ರಕರಣಗಳನ್ನು ದಾಖಲಿಸಿ, 3600 ರೂ.ಗಳನ್ನು ದಂಡದ ರೂಪದಲ್ಲಿ ಸಂಗ್ರಹಿಸಲಾಗಿದೆ. ತಂಡವು ತಾಲ್ಲೂಕು ಆಸ್ಪತ್ರೆಯಿಂದ ಬಸ್ ನಿಲ್ದಾಣದವರೆಗೂ ಎಲ್ಲಾ ಹೋಟೆಲ್, ಬಾರ್, ಪಾನ್ ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು.
ತಾಲ್ಲೂಕು ದಂಡಾಧಿಕಾರಿ ಡಾ. ನಾಗವೇಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನಾಗರಾಜ್, ಮುಖ್ಯಾಧಿಕಾರಿ ರಾಜು ಡಿ.ಬಣಕಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್ ಮತ್ತಿತರರು ಭಾಗವಹಿಸಿದ್ದರು.