ಹರಪನಹಳ್ಳಿ, ಜು.25- ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವಂತೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುಮ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಹೋರಾಟ ನಡೆಸುತ್ತಿರುವ ಅನೇಕರಿಗೆ ಈಗಾಗಲೇ ಕೊರೊನಾ ಸೋಂಕು ತಗುಲಿದೆ. ಸರ್ಕಾರ ಇವರನ್ನು ಕೊರೊನಾ ವಾರಿಯರ್ಸ್ ಎಂದು ಕೊಂಡಾಡಿದೆ. ಆದರೆ ಕೇವಲ 4 ರಿಂದ 6 ಸಾವಿರ ರೂಪಾಯಿ ಮಾತ್ರ ಮಾಸಿಕ ವೇತನ ನೀಡುತ್ತಿದೆ. ಬಜೆಟ್‌ನಲ್ಲಿ 8-9 ಸಾವಿರ ಎಂದು ಘೋಷಿದ್ದರೂ, ಜಾರಿಗೆ ಬಂದಿಲ್ಲ. ಕೂಡಲೇ ಕಾರ್ಯಕರ್ತೆಯರ ಮಾಸಿಕ 12,000 ರೂ. ಗೌರವ ಧನ ಖಾತರಿಪಡಿಸಬೇಕು. ಕೋವಿಡ್-19ರ ವಿರುದ್ಧ ಹೋರಾಟಕ್ಕೆ ಅಗತ್ಯವಿರುವಷ್ಟು ಸಂರಕ್ಷಣಾ ಸಾಮಾಗ್ರಿಗಳನ್ನು ನೀಡಬೇಕು ಮತ್ತು ಕೊರೊನಾ ಸೋಂಕಿಗೆ ಒಳಗಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ, ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.