ಬೆಂಗಳೂರು, ಜು. 28 – ರಾಜ್ಯದ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಇಂದು ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಕೊರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬಿಬಿಎಂಪಿ ವಿಶೇಷ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ. ಇವರಲ್ಲಿ ಒಬ್ಬರು ಹಣಕಾಸು ಮತ್ತು ಐಟಿ ವಿಭಾಗದ ವಿಶೇಷ ಆಯುಕ್ತರು, ಮತ್ತೊಬ್ಬರು ಯೋಜನಾ ವಿಭಾಗದ ವಿಶೇಷ ಆಯುಕ್ತರಾಗಿದ್ದಾರೆ. ಕವಿತಾ ಎಸ್. ಮಣ್ಣಿಕೇರಿ ಅವರು ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಈವರೆಗೂ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಆರ್. ವಿನೋತ್ ಪ್ರಿಯಾ ಎಂಎಸ್‌ಎಂಇ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದಾರೆ.
January 5, 2025