ಜಗಳೂರು, ಆ.2- ಮಾದಿಗ ದಂಡೋರ ಸಮಿತಿಯ ರಾಜ್ಯಾಧ್ಯಕ್ಷ ಎಂ.ಶಂಕರಪ್ಪ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಮೂಲಕ ಮಾದಿಗ ದಂಡೋರ ಸಮುದಾಯಕ್ಕೆ ಬಿಜೆಪಿ ಪಕ್ಷವು ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟಂತಾಗಿದೆ ಎಂದು ದಲಿತ ಮುಖಂಡ ಗೌರಿಪುರದ ಕುಬೇರಪ್ಪ ಹೇಳಿದರು.
ಪಟ್ಟಣದ ವಿದ್ಯಾನಗರದಲ್ಲಿರುವ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಮೂಲೆ ಮೂಲೆಯಲ್ಲಿ ಸಂಚರಿಸಿ, ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಿರುವ ಇವರನ್ನು ಬಿಜೆಪಿ ಪಕ್ಷ ಗುರುತಿಸಿ, ರಾಜ್ಯ ಉಪಾಧ್ಯಕ್ಷ ಹುದ್ದೆಯನ್ನು ನೀಡಿರುವುದು ಅವರ ಸಂಘಟನಾತ್ಮಕ ಕೌಶಲ್ಯಕ್ಕೆ ಸಿಕ್ಕ ಪ್ರತಿಫಲವಾಗಿದೆ. ಪಕ್ಷದ ಉಪಾಧ್ಯಕ್ಷ ಹುದ್ದೆಯನ್ನು ನೀಡಿರುವುದು ಸ್ವಾಗತಾರ್ಹ ಎಂದರು.
ತುಪ್ಪದಹಳ್ಳಿ ಪೂಜಾರ್ ಸಿದ್ದೇಶ್, ತೋರಣಗಟ್ಟೆ ತಿಪ್ಪೇಸ್ವಾಮಿ, ಮೆದಗಿನಕೆರೆ ಹನುಮಂತಪ್ಪ, ಮುಷ್ಠಿಗರಹಳ್ಳಿ ದಂಡ್ಯೆಪ್ಪ, ರಸ್ತೆ ಮಾಕುಂಟೆ ನಾಗರಾಜ್, ಸೂ.ಕುಬೇರಪ್ಪ, ಹೊಸಕೆರೆ ಪ್ರಭಣ್ಣ ಮತ್ತಿತರರು ಉಪಸ್ಥಿತರಿದ್ದರು.