ಗಾಂಧಿ ನಗರದ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರಕ್ಕೆ ಒತ್ತಾಯ

ಗಾಂಧಿ ನಗರದ ರುದ್ರಭೂಮಿಯಲ್ಲಿ ವಿದ್ಯುತ್ ಚಿತಾಗಾರಕ್ಕೆ ಒತ್ತಾಯ - Janathavaniದಾವಣಗೆರೆ, ನ.8- ಗಾಂಧಿ ನಗರ ಸಮೀಪದ ರುದ್ರಭೂಮಿಯಲ್ಲಿ ಶವ ಸಂಸ್ಕಾರಕ್ಕೆ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವುದರ ಜೊತೆಗೆ ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಎಸ್.ಸಿ. ಘಟಕದ ಅಧ್ಯಕ್ಷ ಬಿ.ಎಚ್. ವೀರಭದ್ರಪ್ಪ ಒತ್ತಾಯಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಶವ ಸಂಸ್ಕಾರಕ್ಕೆ ವಿದ್ಯುತ್ ಚಿತಾಗಾರ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ರುದ್ರಭೂಮಿಯಲ್ಲಿ ವಿದ್ಯುತ್ ದೀಪ, ನೀರು, ಸ್ವಚ್ಛತೆ ಕಾಪಾಡಲು ಮಹಾನಗರ ಪಾಲಿಕೆ ಗಮನ ಹರಿಸಿಲ್ಲ. ಈಗಾಗಲೇ ಶಾಸಕರು, ಸಂಸದರು ಸೇರಿದಂತೆ ಸಂಬಂಧ ಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾರೊಬ್ಬರೂ ಗಮನ ಹರಿಸಿಲ್ಲ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಮುಂದಿನ ವರ್ಷದ ಫೆಬ್ರವರಿ 25ರಂದು ಪಾಲಿಕೆ ಮುಂಭಾಗದಲ್ಲಿ ಆಮರಣಾಂತ ಉಪವಾಸ ಧರಣಿ ಮತ್ತು ಸಮಾಧಿಗಳ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಗರದ ವಾರ್ಡ್‍ಗೆ ಕನಿಷ್ಠ ಏಳು ಜನ ಪೌರ ಕಾರ್ಮಿಕರನ್ನಾದರೂ ನಿಯೋಜಿಸಬೇಕಾಗಿದೆ. ಈ ನಿಟ್ಟಿನಲ್ಲಿ 250 ಜನ ಪೌರ ಕಾರ್ಮಿಕರನ್ನು ಹೊಸದಾಗಿ ನೇಮಿಸಿಕೊಳ್ಳಬೇಕೆಂದು ಆಗ್ರಹಿಸಿದರು.

error: Content is protected !!