ದಾವಣಗೆರೆ ತಾಲ್ಲೂಕು ಶ್ಯಾಗಲೆ ಗ್ರಾಮದ ಬೀಸನಳ್ಳಿ ದೇವೇಂದ್ರಪ್ಪ ಇವರ ಧರ್ಮಪತ್ನಿ ಶ್ರೀಮತಿ ಶಂಕರಮ್ಮ ಅವರು ದಿನಾಂಕ 12.11.2020ರ ಗುರುವಾರ ಸಂಜೆ 4.30 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 13.11.2020ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಶ್ಯಾಗಲೆ ಗ್ರಾಮದ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
July 26, 2024