ದಾವಣಗೆರೆ ನ.13-ಜಿಲ್ಲೆಯಾದ್ಯಂತ ಅನೇಕ ರೈತರು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ, ಸುಮಾರು 70 ಲಕ್ಷದಷ್ಟು ಪರಿಹಾ ರದ ಹಣ ಬಾಕಿ ಇದ್ದು, ಆದಷ್ಟು ಬೇಗ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗರಾಜ್ ಲೋಕಿಕೆರೆ ಮನವಿ ಸಲ್ಲಿಸಿದರು.
ಈ ಸಂದರ್ಭ ದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗರಾಜ್ ಲೋಕಿಕೆರೆ, ಲೋಕಿಕೆರ ಮಂಜುನಾಥ್, ರಾಜು ಮಠದ್, ಕೂಲಂಬಿ ಬಸವರಾಜ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.