ದಾವಣಗೆರೆ, ನ. 13- ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಬಾರಿ ಸಿಎಸ್‍ಐಆರ್ ಮತ್ತು ಎನ್‍ಇಇಆರ್‍ಐ ಪ್ರಮಾಣಿಕೃತ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವಂತೆ ಹಾಗೂ ಸಾರ್ವಜನಿಕರು ಬಳಸುವಂತೆ ಸರ್ಕಾರ ಮತ್ತು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಹಬ್ಬ ಸಂದರ್ಭದಲ್ಲಿ ನ. 16 ರವರೆಗೆ ಹಸಿರು ಪಟಾಕಿಗಳನ್ನು ಮಾತ್ರ ಪಟಾಕಿ ಮಾರಾಟಗಾರರಿಂದ ಮಾರಾಟ ಮಾಡಲು ಮತ್ತು ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಹಚ್ಚಲು ಅನುಮತಿಸಲಾಗಿದೆ ಎಂದರು.
ಪೊಲೀಸ್ ಇಲಾಖೆ, ನಗರಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರಾಧಿಕಾರಗಳು ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.