ಮಹಿಳೆಯರಿಗೆ ಸಮಾನ ಅವಕಾಶಗಳು ಸಿಕ್ಕಾಗ ಮಾತ್ರ ಸಮಾಜ ಅಭಿವೃದ್ಧಿಯಾಗಲು ಸಾಧ್ಯ

ಜಗಳೂರು : ಇಂದಿರಾ ಗಾಂಧಿ ಜನ್ಮದಿನಾಚರಣೆಯಲ್ಲಿ ಭವ್ಯ ನರಸಿಂಹಮೂರ್ತಿ

ಜಗಳೂರು, ನ.19- ಮಹಿಳೆಯರಿಗೆ ಸಮಾನ ಅವಕಾಶಗಳು ಸಿಕ್ಕಾಗ ಮಾತ್ರ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಿಯದರ್ಶಿನಿ ವಿಭಾಗದ ರಾಜ್ಯ ಸಂಚಾಲಕರಾದ ಭವ್ಯ ನರಸಿಂಹಮೂರ್ತಿ ಹೇಳಿದರು.

ಪಟ್ಟಣದ ಕಾಂಗ್ರೆಸ್ ಮುಖಂಡ ಸುಧೀರ್‌ ರೆಡ್ಡಿ ನಿವಾಸದ ಆವರಣದಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಮಾಜಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆ ಹಾಗೂ ಪ್ರಿಯದರ್ಶಿನಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ತಮ್ಮದೇ ಕೊಡುಗೆ ನೀಡಿದ್ದಾರೆ. ಒಬ್ಬ ಮಹಿಳೆ ಒಂದು ದೇಶವನ್ನು ಸಮರ್ಥವಾಗಿ ಆಡಳಿತ ನಡೆಸಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದು, ಅವರ ವಿಚಾರಧಾರೆಗಳಿಗೆ ಪ್ರಭಾವಿತಳಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಪ್ರಿಯದರ್ಶಿನಿ ಎಂಬ ವಿಭಾಗದಡಿಯಲ್ಲಿ ಮಹಿಳೆಯರ ಹಕ್ಕು ಮತ್ತು ಕರ್ತವ್ಯಗಳು ಹಾಗೂ ಮಹಿಳಾ ಶೋಷಣೆ ಮುಕ್ತ ಸಮಾಜ ನಿರ್ಮಾಣ ಮಾಡಲು ಪ್ರತೀ ತಾಲ್ಲೂಕು ಮಟ್ಟದಲ್ಲೂ ಸಂವಾದ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಗೆ ಮಹಿಳೆಯರನ್ನು ಸೆಳೆಯಲಾಗುವುದು ಎಂದರು.

ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಮಾತನಾಡಿ, ಪ್ರಿಯದರ್ಶಿನಿ ಎಂದೇ ಖ್ಯಾತವಾಗಿದ್ದ ಉಕ್ಕಿನ ಮಹಿಳೆ ಇಂದಿರಾಗಾಂಧಿ ಅವರು ಸಂಕಷ್ಟದ ಸಮಯದಲ್ಲೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಗ್ರಾಮೀಣ ಭಾಗದ ಬಡಜನರ, ಮಹಿಳೆಯರ ಹಾಗೂ ಎಲ್ಲಾ ವರ್ಗದ ಜನರ ಹಿತಕಾಯುವಲ್ಲಿ ಶ್ರಮ ವಹಿಸಿದ್ದು, ಅವರ ಆದರ್ಶದ ಕೊಡುಗೆಗಳೇ ಇಂದಿನ ಕಾಂಗ್ರೆಸ್ ಪಕ್ಷದ ಉನ್ನತಿಗೆ ಕಾರಣವಾಗಿವೆ ಎಂದರು. ಆದರೆ, ಇತ್ತೀಚೆಗೆ ಏನೂ ಮಾಡದ ಬಿಜೆಪಿ ಪಕ್ಷ ಕೇವಲ ಸುಳ್ಳು ಹೇಳಿ ಯುವಕರನ್ನು ದಾರಿ ತಪ್ಪಿಸಿ ಭಾವನಾ ತ್ಮಕ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿದೆ. ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ದೇಶಕ್ಕೆ ಅವರ ಕೊಡುಗೆ ಶೂನ್ಯವಾಗಿದೆ ಎಂದರು.

ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಅತ್ಯಂತ ಶ್ರೀಮಂತ ಕುಟುಂಬವಾಗಿದ್ದ ಇಂದಿರಾ ಗಾಂಧಿ ಅವರ ಕುಟುಂಬ ಕೇವಲ ಸ್ವಾರ್ಥಕ್ಕಾಗಿ ಬದುಕದೇ ದೇಶದ ಉನ್ನತಿಗಾಗಿ ತಮ್ಮ ಪ್ರಾಣವನ್ನೇ ಪಣವಾಗಿಟ್ಟಂತಹ ಕುಟುಂಬವಾಗಿದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಷೀರ್ ಅಹಮದ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಕೆಂಚಮ್ಮ ಧನ್ಯಕುಮಾರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಶಿವಾನಂದಪ್ಪ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ನಾಗರತ್ನಮ್ಮ ಮಲ್ಲೇಶಪ್ಪ, ತಾ.ಪಂ. ಸದಸ್ಯ ಕುಬೇಂದ್ರಪ್ಪ, ಪ.ಪಂ ಸದಸ್ಯರಾದ ರವಿಕುಮಾರ್, ಶಕೀಲ್‌ ಅಹಮದ್, ಪ.ಪಂ. ಮಾಜಿ ಅಧ್ಯಕ್ಷೆ ರಾಜೇಶ್ವರಿ ಲೋಕೇಶ್, ಪ್ರಿಯದರ್ಶಿನಿ ವಿಭಾಗದ ಜಿಲ್ಲಾ ಸಂಚಾಲಕಿ ಸುಧಾ, ಪ್ರಧಾನ ಕಾರ್ಯದರ್ಶಿ ಸಾವಿತ್ರಮ್ಮ, ಕರುನಾಡ ರಕ್ಷಣಾ ಪಡೆ ಜಿಲ್ಲಾಧ್ಯಕ್ಷೆ ಎಸ್.ಕೆ.ಇಂದಿರಾ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖ ರಪ್ಪ, ಮುಖಂಡರಾದ ಸಿ.ತಿಪ್ಪೇಸ್ವಾಮಿ ಬಿ.ಲೋ ಕೇಶ್, ವೆಂಕಟೇಶ್, ಅಜಾಮುಲ್ಲಾ, ಬಿ.ಹೆಚ್.ನಾಗ ರಾಜ್, ಬೊಮ್ಮಲಿಂಗ, ಶ್ರೀನಿವಾಸ್ ಹಾಜರಿದ್ದರು.

error: Content is protected !!