ದಾವಣಗೆರೆ, ನ.24- ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಎಂಎಸ್‍ಎಸ್) ಜಿಲ್ಲಾ ಸಮಿತಿಯು ನ. 26ರ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಕಾರ್ಯದರ್ಶಿ ಭಾರತಿ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತರುತ್ತಿರುವ ಕಾರ್ಮಿಕ ವಿರೋಧಿ ನೀತಿಗಳು, ಕೃಷಿ ಕಾಯ್ದೆಗಳ ತಿದ್ದುಪಡಿ, ರೈಲ್ವೆ ಹಾಗೂ ಇನ್ನಿತರೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಖಾಸಗೀಕರಣ, ರಾಷ್ಟ್ರೀಯ ಶಿಕ್ಷಣ ನೀತಿ 2020 ಮುಂತಾದ ಹಲವಾರು ಜನವಿರೋಧಿ ನೀತಿಗಳನ್ನು ದೊಡ್ಡ ದೊಡ್ಡ ಉದ್ಯಮಪತಿಗಳಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ತರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
January 12, 2025