ಮಲೇಬೆನ್ನೂರು, ನ.27- ಭಾನುವಳ್ಳಿ ಗ್ರಾಮದಲ್ಲಿ `ಸಂವಿಧಾನ ದಿನ’ವನ್ನು ಹರಿಹರ ತಾಲ್ಲೂಕು ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಆಚರಿಸಲಾಯಿತು.
ಮಾಜಿ ಶಾಸಕ ಬಿ.ಪಿ.ಹರೀಶ್ ಮಾತನಾಡಿ, ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ. ಸಂವಿಧಾನದಿಂದಾಗಿ ದೇಶದಲ್ಲಿ ಸಮಾನತೆ, ಸಾಮರಸ್ಯದಿಂದ ನಾವೆಲ್ಲರೂ ಜೀವನ ನಡೆಸುತ್ತಿದ್ದೇವೆ. ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸುವ ಕೆಲಸ ಮಾಡಬೇಕೆಂದು ಹರೀಶ್ ಮನವಿ ಮಾಡಿದರು.
ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಹಿಂಡಸಘಟ್ಟಿ ಲಿಂಗರಾಜ್, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಹುಗ್ಗಿ ಮಹಾಂತೇಶ್, ಆದಾಪುರದ ವೀರೇಶ್, ಎಸ್ಸಿ ಮೋರ್ಚಾ ಅಧ್ಯಕ್ಷ ನಾಗರಾಜ್, ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಮತ್ತು ಗ್ರಾಮದ ಮಂಜಪ್ಪ ಬಾರ್ಕಿ, ಎ.ಕೆ.ಮಂಜಪ್ಪ ಮತ್ತಿತರರು ಭಾಗವಹಿಸಿದ್ದರು.