ದಾವಣಗೆರೆಯ ನೂತನ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಎಸ್. ಎಸ್. ಮಠಪತಿ ಅವರು ದಿನಾಂಕ 29.11.2020ರ ಭಾನುವಾರ ಸಂಜೆ 4.15 ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು. ತರಳಬಾಳು ವಿದ್ಯಾಸಂಸ್ಥೆಯಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿ, ಪ್ರಾಚಾರ್ಯರಾಗಿ ನಿವೃತ್ತರಾದರು. ಶ್ರೀಯುತರು ಸಿರಿಗೆರೆ ಹಿರಿಯ ಜಗದ್ಗುರುಗಳೊಂದಿಗೆ ನಿಕಟ ಒಡನಾಟ ಹೊಂದಿ, ಶ್ರೀಮಠದ ವಿಶೇಷ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ನೂತನ ವಿದ್ಯಾಸಂಸ್ಥೆಯ ಸಂಸ್ಥಾಪಕರಲ್ಲಿ ಒಬ್ಬರಾದ ಶ್ರೀಯುತರು ಪ್ರಾಚಾರ್ಯರಾಗಿಯೂ ಸೇವೆ ಸಲ್ಲಿಸಿ, ಹಾಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ದಿನಾಂಕ 01.12.2020 ರ ಮಂಗಳವಾರ ಮಧ್ಯಾಹ್ನ 1.30 ರಿಂದ 2.30 ರ ವರೆಗೆ ನೂತನ ವಿದ್ಯಾಸಂಸ್ಥೆ ಆವರಣದಲ್ಲಿ ಶ್ರೀಯುತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಶ್ರೀಯುತರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ದಿನಾಂಕ: 02.12.2020ರ ಬುಧವಾರ ಮಹಾರಾಷ್ಟ್ರದ ಸಿದ್ಧನಾಥದಲ್ಲಿರುವ ಮೃತರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 25, 2025