ದಾವಣಗೆರೆ, ಡಿ. 5 – ಸ್ಮಾರ್ಟ್ ಸಿಟಿ ಯೋಜನೆಯಡಿ ಸುಮಾರು 13.5 ಲಕ್ಷ ರೂ.ಗಳ ಮೌಲ್ಯದ ಉಪಕರಣಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರು ಅಗ್ನಿಶಾಮಕ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಜಿಲ್ಲಾಡಳಿತ ಭವನ ಆವರಣದಲ್ಲಿ ಈ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಎಸ್.ಎ. ರವೀಂದ್ರನಾಥ್, ಮೇಯರ್ ಬಿ.ಜಿ. ಅಜಯ್ ಕುಮಾರ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ ಮತ್ತಿತರರು ಉಪಸ್ಥಿತರಿದ್ದರು.
January 10, 2025