ಜಗಳೂರು, ಡಿ.9- ರೈತ ಸಂಘಟನೆಗಳು ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪಕ್ಷದ ಕಾರ್ಯಕರ್ತರು ಮಹಾತ್ಮಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತಾಲ್ಲೂಕು ಕಛೇರಿ ವರೆಗೆ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮಾಜಿ ಶಾಸಕ ಹೆಚ್.ಪಿ. ರಾಜೇಶ್, ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ ಅವರುಗಳು ಮಾತನಾಡಿ, ಬಿಜೆಪಿ ಪಕ್ಷದ ಮೂರು ಸುಗ್ರೀವಾಜ್ಞೆ ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನವಾಗಿದ್ದು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ತಾಲ್ಲೂಕು ಕೆಪಿಸಿಸಿ ಉಸ್ತುವಾರಿ ಕಲ್ಲೇಶ ರಾಜ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಅಜಾಮುಲ್ಲಾ, ಮುಖಂಡರಾದ ಬಿ. ಲೋಕೇಶ್, ವೆಂಕಟೇಶ್, ಸಿ. ತಿಪ್ಪೇಸ್ವಾಮಿ, ರೇವಣ್ಣ, ಹಟ್ಟಿ ತಿಪ್ಪೇಸ್ವಾಮಿ, ಶ್ರೀನಿವಾಸ್, ಚೌಡಪ್ಪ, ರಾಜಣ್ಣ, ರಮೇಶ್, ಮಹಿಳಾ ಘಟಕದ ಸಾವಿತ್ರಮ್ಮ, ಕೆಂಚಮ್ಮ ಹಾಗು ಇನ್ನಿತರರು ಪಾಲ್ಗೊಂಡಿದ್ದರು.