ದಾವಣಗೆರೆ, ಡಿ.10- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ವತಿಯಿಂದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮ ಶ್ರೀರಾಮನಗರದ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
31ನೇ ವಾರ್ಡ್ ಪಾಲಿಕೆ ಸದಸ್ಯೆ ಗೀತಾ ನಾಗರಾಜ್, ಮುಖಂಡರಾದ ಚಂದ್ರಪ್ಪ, ತಾಲ್ಲೂಕು ಕ್ಷಯರೋಗ ಮೇಲ್ವಿಚಾರಕ ಬಸವರಾಜ್, ಎಸ್‌ಟಿ ಎಲ್‌ಎಸ್ ಎಚ್.ವಿ. ಕುಮಾರ್, ಅಬ್ದುಲ್, ಪ್ರಕಾಶ್, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.