ನಾಡಿನ ಹಿರಿಯ ವಿದ್ವಾಂಸ, ವಾಗ್ಮಿ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಬನ್ನಂಜೆ ಗೋವಿಂದಾಚಾರ್ಯ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ಉಡುಪಿ ಜಿಲ್ಲೆಯ ಅಂಬಲ ಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
July 24, 2024