ದಾವಣಗೆರೆ,ಡಿ.12-ಕೆಎಸ್ಸಾರ್ಟಿಸಿ ನೌಕರರು ದಿಢೀರ್ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಜೆ. ಸೋಮನಾಥ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಹಕ್ಕು. ಆದರೆ, ಸಾರ್ವಜನಿಕರಿಗೆ ತೊಂದರೆ ಕೊಟ್ಟು ದಿಢೀರ್ ಪ್ರತಿಭಟನೆಗಿಳಿಯುವುದು ಸಮಂಜಸವಲ್ಲ ಎಂದು ಅವರು ಹೇಳಿದ್ದಾರೆ. ಸಾರಿಗೆ ನೌಕರರು ಪ್ರತಿಭಟನೆ ನಡೆಸುವ ಮೊದಲು ಸಂಬಂಧಪಟ್ಟವರಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದರೆ, ಅವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಅನುಕೂಲವಾಗುತ್ತಿತ್ತು ಎಂದು ಸೋಮನಾಥ್ ಅಭಿಪ್ರಾಯಪಟ್ಟಿದ್ದಾರೆ.