ಜೆಸಿಟಿಯು ನೇತೃತ್ವದಲ್ಲಿ ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ

ರೈತ-ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗೆ ವಿರೋಧ

ದಾವಣಗೆರೆ, ಡಿ.14- ರೈತ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ನಗರದಲ್ಲಿ ಇಂದು ಜೆಸಿಟಿಯು ನೇತೃತ್ವದಲ್ಲಿ ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಜಯದೇವ ವೃತ್ತದ ಬಳಿ ಜಿಲ್ಲಾಧ್ಯಕ್ಷ ಹೆಚ್.ಕೆ. ರಾಮಚಂದ್ರಪ್ಪ ಮತ್ತು ಮುಖಂಡರ ನೇತೃತ್ವದಲ್ಲಿ ಜಮಾಯಿಸಿದ್ದ ಸಂಘಟನೆಯ ಕಾರ್ಯಕರ್ತರು, ಪ್ರತಿಭಟನಾ ಮೆರವಣಿಗೆ ಮುಖಾಂತರ ಅಶೋಕ ರಸ್ತೆ, ಮಹಾತ್ಮ ಗಾಂಧಿ ವೃತ್ತ, ಮಂಡಿಪೇಟೆ, ಗಡಿಯಾರ ಕಂಬದ ರಸ್ತೆ ಮಾರ್ಗವಾಗಿ ಪ್ರಧಾನ ಅಂಚೆ ಕಚೇರಿ ಬಳಿ ತೆರಳಿ ಪ್ರತಿಭಟಿಸಿ ಬಹಿರಂಗ ಸಭೆ ನಡೆಸಲಾಯಿತು. ಬಹಿರಂಗ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್.ಕೆ. ರಾಮಚಂದ್ರಪ್ಪ, ರೈತರಿಗೆ ಮಾರಕವಾಗಿರುವ ಕರಾಳ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜೆಸಿಟಿಯು ಜಿಲ್ಲಾ ಸಂಚಾಲಕ ಆವರಗೆರೆ ಚಂದ್ರು, ಖಜಾಂಚಿ ಆನಂದರಾಜ್, ಮುಖಂಡರಾದ ಕೆ.ಹೆಚ್. ಆನಂದರಾಜು, ಶ್ರೀನಿವಾಸ್, ಷಣ್ಮುಖ ಸ್ವಾಮಿ, ಶಿರಿನ್ ಬಾನು, ಆವರಗೆರೆ ವಾಸು, ಎಂ.ಬಿ. ಶಾರದಮ್ಮ , ಸರೋಜಾ, ವಿಶಾಲಾಕ್ಷಿ, ಸತೀಶ್ ಅರವಿಂದ್, ದ್ರಾಕ್ಷಾಯಣಮ್ಮ, ಮಹಾಂತೇಶ ನಾಗನೂರ ಸೇರಿದಂತೆ ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಐಎಟಿಯುಸಿ, ನೆರಳು ಬೀಡಿ ಕಾರ್ಮಿಕರ ಯೂನಿಯನ್, ಜನಶಕ್ತಿ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದ್ದರು.

error: Content is protected !!