ದಾವಣಗೆರೆ, ಡಿ.20- ನಗರ ಪಾಲಿಕೆಯ 15ನೇ ವಾರ್ಡ್ನ ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್ ಹೊಸ ಕೋರ್ಟ್ ಪಕ್ಕದಲ್ಲಿ ಸಿಸಿ ರಸ್ತೆ ಹಾಗೂ ಡ್ರೈನೇಜ್ ಕಾಮಗಾರಿ ನಡೆಯುತ್ತಿದ್ದು, ಈ ವಾರ್ಡಿನ ಪಾಲಿಕೆ ಸದಸ್ಯರಾದ ಶ್ರೀಮತಿ ಆಶಾ ಉಮೇಶ್ ಅವರು ಇಂದು ಕಾಮಗಾರಿಯನ್ನು ಪರಿಶೀಲಿಸಿದರು. ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಕಾಮಗಾರಿ ಕಳಪೆ ಮಾಡದಂತೆ ಸರಿಯಾಗಿ ಕೆಲಸ ನಿರ್ವಹಿಸಿ ಎಂದು ತಾಕೀತು ಮಾಡಿದರು. ಇದೇ ಸಂದರ್ಭದಲ್ಲಿ ಉಮಾಶಂಕರ್, ವೀರಯ್ಯ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
January 10, 2025