ಶಿವಮೊಗ್ಗ, ಆ.10- ಸೋಮವಾರವೂ ಮಲೆನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ತುಂಗಾ, ಭದ್ರಾ ನದಿಗಳಲ್ಲಿ ನೀರಿನ ಹರಿವು ತಗ್ಗಿದೆ.
ಗಾಜನೂರಿನ ತುಂಗಾ ಜಲಾಶಯಕ್ಕೆ 35 ಸಾವಿರ ಕ್ಯೂಸೆಕ್ಸ್ ಒಳಹರಿವು ಇದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬೀಡಲಾಗುತ್ತಿದೆ. ಇದರಿಂದಾಗಿ ತುಂಗಭದ್ರಾ ನದಿ ಯಲ್ಲೂ ನೀರಿನಮಟ್ಟ ಕಡಿಮೆ ಆಗಿದೆ.ಭದ್ರಾ ಜಲಾಶಯಕ್ಕೆ ಸೋಮವಾರ ಬೆಳಿಗ್ಗೆ 18,331 ಕ್ಯೂಸೆಕ್ಸ್ ಇದ್ದ ನೀರಿನ ಒಳಹರಿವು ಸಂಜೆ 15 ಸಾವಿರ ಕ್ಯೂಸೆಕ್ಸ್ಗೆ ಇಳಿಕೆ ಕಂಡಿತ್ತು. ಜಲಾಶಯದ ನೀರನಮಟ್ಟ 174 ಅಡಿ ಆಗಿತ್ತು. ಜಲಾಶಯ ಭರ್ತಿಗೆ 12 ಅಡಿ ಮಾತ್ರ ಬಾಕಿ ಇದೆ. ಕಳೆದ ವರ್ಷ ಜಲಾ ಶಯದಲ್ಲಿ ಈ ದಿನ 171 ಅಡಿ ನೀರಿತ್ತು.