ಹೊನ್ನಾಳಿಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್
ಹೊನ್ನಾಳಿ, ಆ.19- ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡಲೇಬೇಕು ಎಂಬುದು ತಮ್ಮ ಒತ್ತಾಯವಾಗಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದರು.
ಸಿಎಂ ರಾಜಕೀಯ ಕಾರ್ಯ ದರ್ಶಿ ಎಂ.ಪಿ. ರೇಣುಕಾ ಚಾರ್ಯ ಅವರ ಇಲ್ಲಿನ ನಿವಾಸ ದಲ್ಲಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಅಭಿವೃದ್ಧಿಯ ಹಿತ ದೃಷ್ಟಿಯಿಂದ ಸ್ಥಳಿಯ ಶಾಸಕರೊ ಬ್ಬರಿಗೆ ಸಚಿವ ಸ್ಥಾನ ನೀಡಿ, ಜಿಲ್ಲೆಯ ಉಸ್ತುವಾರಿ ವಹಿಸ ಬೇಕು ಎಂಬುದು ತಮ್ಮ ಅಭಿಪ್ರಾ ಯವಾಗಿದೆ ಎಂದು ತಿಳಿಸಿದರು.
ನೆರೆಯಿಂದ ತತ್ತರಿಸಿರುವ ಬೆಳಗಾವಿಯಲ್ಲಿ ಪರಿಹಾರ ಕಾರ್ಯಗಳ ಉಸ್ತುವಾರಿ ನೋಡುವು ದನ್ನು ಬಿಟ್ಟು ಡಿಸಿಎಂ ಹುದ್ದೆ ಕೇಳಲು ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ ಇದು ಸರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬಿ.ಸಿ. ಪಾಟೀಲ್, ರಮೇಶ್ ಜಾರಕಿಹೊಳಿ ಅನ್ಯ ಕಾರ್ಯನಿಮಿತ್ತ ದೆಹಲಿಗೆ ಹೋಗಿದ್ದಾರೆ. ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಸಲು ಹೋಗಿರಬಹುದು ಎಂದರು.
ಕೃಷಿ ಇಲಾಖೆಯ ಯೋಜನೆಗಳ ಬಗ್ಗೆ ಚರ್ಚಿಸಲು ನಾನೂ ದೆಹಲಿಗೆ ಹೋಗಬೇಕು ಅಂದುಕೊಂಡಿದ್ದೇನೆ. ದೆಹಲಿಗೆ ಹೋದ ತಕ್ಷಣ ಡಿಸಿಎಂ ಹುದ್ದೆ ಕೇಳುವುದಕ್ಕೇ ಹೋಗಿದ್ದಾರೆ ಎಂದು ಅರ್ಥೈಸುವುದು ತಪ್ಪು ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ದೆಹಲಿಗೆ ಹೋಗುತ್ತಾರೆ. ಅಂದಾಕ್ಷಣ ಅವರು ಪ್ರಧಾನ ಮಂತ್ರಿ ಆಗಲಿಕ್ಕೆ ದೆಹಲಿಗೆ ಹೋಗಿ ದ್ದಾರೆ ಎಂದು ಹೇಳಲು ಆಗುತ್ತದೆಯೇ ಎಂದು ಮರು ಪ್ರಶ್ನೆ ಹಾಕಿದರು.
ಪ್ರವಾಹದಿಂದ ರಾಜ್ಯದಲ್ಲಿನ ಬೆಳೆ ಹಾನಿಗೆ ಸಂಬಂಧಿಸಿದಂತೆ 400 ಕೋಟಿ ರೂ.ಗಳಷ್ಟು ಪರಿಹಾರ ನೀಡಬೇಕು ಎಂದು ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ಈ ಕುರಿತು ಶೀಘ್ರವೇ ಇನ್ನೊಮ್ಮೆ ಒತ್ತಡ ಹೇರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಜಿ.ಪಂ. ಸದಸ್ಯರಾದ ಎಂ.ಆರ್. ಮಹೇಶ್, ಉಮಾ ರಮೇಶ್, ಸಿ. ಸುರೇಂದ್ರನಾಯ್ಕ, ತಾ.ಪಂ. ಪ್ರಭಾರ ಅಧ್ಯಕ್ಷ ಕೆ.ಎಲ್. ರಂಗನಾಥ್, ನ್ಯಾಮತಿ ತಾ.ಪಂ. ಅಧ್ಯಕ್ಷ ಎಸ್.ಪಿ. ರವಿಕುಮಾರ್, ಎಪಿಎಂಸಿ ಅಧ್ಯಕ್ಷ ಜಿ.ಎಸ್. ಸುರೇಶ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಪ.ಪಂ ಸದಸ್ಯರು, ಮುಖಂಡರಾದ ಶಾಂತರಾಜ್ ಪಾಟೀಲ್, ಎಂ.ಪಿ. ರಮೇಶ್ ಮತ್ತಿತರರು ಉಪಸ್ಥಿತರಿದ್ದರು.