ಅವಳಿ ತಾಲ್ಲೂಕುಗಳನ್ನು ಧೂಳುಮುಕ್ತ ತಾಲ್ಲೂಕುಗಳನ್ನಾಗಿಸುವೆ : ರೇಣುಕಾಚಾರ್ಯ

ಹೊನ್ನಾಳಿ, ಆ.21- ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನಾದ್ಯಂತ ನೂರಾರು ಕೋಟಿ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದು, ಇನ್ನುಳಿದ ಹಳ್ಳಿಗಳಲ್ಲೂ ಮುಂದಿನ ದಿನಗಳಲ್ಲಿ ಸಿಸಿ ರಸ್ತೆ ಮಾಡಿಸುವ ಮೂಲಕ ಅವಳಿ ತಾಲ್ಲೂಕುಗಳನ್ನು ಧೂಳು ಮುಕ್ತ ತಾಲ್ಲೂಕುಗಳನ್ನಾಗಿ ಮಾಡುತ್ತೇನೆಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಬದಲಾಯಿಸುವಂತೆ ಜಿಲ್ಲೆಯ ಯಾವೊಬ್ಬ ಶಾಸಕರೂ ಕೂಡ ಮಾತನಾಡಿಲ್ಲ. ಆದರೆ ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕೆಂದು ಸಿಎಂ ಬಳಿ ಮನವಿ ಮಾಡಿದ್ದೇವೆ ಎಂದರು. 

ಭೈರತಿ ಬಸವರಾಜ್ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇಂತಹ ಉಸ್ತುವಾರಿ ಸಚಿವರು ನಮ್ಮ ಜಿಲ್ಲೆಗೆ ಸಿಕ್ಕಿದ್ದು ನಮ್ಮ ಹೆಮ್ಮೆ ಎಂದ ಶಾಸಕರು, ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯ ಮಾಡಿದ್ದೇವೆಯೇ  ವಿನಃ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಎಂದು ಎಲ್ಲಿಯೂ ಕೇಳಿಲ್ಲ ಎಂದು ರೇಣುಕಾಚಾರ್ಯ  ಸ್ಪಷ್ಟ ಪಡಿಸಿದರು.

ಪಟ್ಟಣದ ಕೋರ್ಟ್‌ ರಸ್ತೆಯನ್ನು ಒಂದು ಕೋಟಿ ಎಪ್ಪತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಸಿಸಿ ರಸ್ತೆ ಮಾಡುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಗುಣಮಟ್ಟ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಕಾಮಗಾರಿಯ ಗುಣಮಟ್ಟ ಕಾಯ್ದು ಕೊಳ್ಳುವಂತೆ ಎಚ್ಚರಿಕೆ ನೀಡಿ ಸುದ್ದಿಗಾರೊಂದಿಗೆ ಮಾತನಾಡಿದರು.

ಈ ಸಂದರ್ಭದಲ್ಲಿ ನ್ಯಾಮತಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಸ್.ಪಿ ರವಿಕುಮಾರ್, ಬಿಜೆಪಿ ಮುಖಂಡ ಅಜಯ್ ಕುಮಾರ್, ರವಿಕುಮಾರ್ ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!