ಮಲೇಬೆನ್ನೂರು, ಆ.27- ಪಟ್ಟಣದಲ್ಲಿ ಟ್ರಾಫಿಕ್ ನಿಯಂತ್ರಣ ದೃಷ್ಟಿಯಿಂದ ಇಬ್ಬರು ಸಂಚಾರಿ ಪೊಲೀಸರನ್ನು ನೇಮಕ ಮಾಡಲಾಗಿದೆ ಎಂದು ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ತಿಳಿಸಿದ್ದಾರೆ.
ಇಲ್ಲಿನ ಮುಖ್ಯ ವೃತ್ತದಲ್ಲಿ ಟ್ರಾಫಿಕ್ ಪೊಲೀಸರನ್ನು ಪರಿಚಯಿಸುವ ಮೂಲಕ ಅವರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಿದರು.
ಪಟ್ಟಣದಲ್ಲಿ ಪ್ರಮುಖ ರಾಜ್ಯ ಹೆದ್ದಾರಿ ಹಾಯ್ದು ಹೋಗಿರುವುದರಿಂದ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬರುತ್ತಿರುವ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸರನ್ನು ನೇಮಿಸಲಾಗಿದೆ. ಎಎಸ್‌ಐ ಮಲ್ಲಿಕಾರ್ಜುನ್ ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ ಎಂದರು. ಟ್ರಾಫಿಕ್ ಸಮಸ್ಯೆ ನಿವಾರಣೆ ಜೊತೆಗೆ ಜನರಲ್ಲಿ ಜಾಗೃತಿ ಮೂಡಿ ಸುವ ಕೆಲಸವನ್ನು ಪೊಲೀಸರು ಮಾಡ ಲಿದ್ದಾರೆ. ಸಾರ್ವಜನಿಕರು ಕಾರು, ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿ ಸದೆ, ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಸಹಕರಿಸಬೇ ಕೆಂದು ನರಸಿಂಹ ತಾಮ್ರಧ್ವಜ ಮನವಿ ಮಾಡಿದರು.
ಪಿಎಸ್‌ಐ ವೀರಬಸಪ್ಪ ಮಾತನಾಡಿ, ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಒಬ್ಬರು ಮತ್ತು ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ಮತ್ತೊಬ್ಬರು ಕಾರ್ಯನಿರ್ವ ಹಿಸಲಿದ್ದಾರೆ. ಫುಟ್‌ಪಾತ್ ವ್ಯಾಪಾರಿಗಳು ಹೆದ್ದಾರಿಯಿಂದ 4-5 ಅಡಿ ಹಿಂದಕ್ಕೆ ಇರಬೇಕು. ಇದರ ಜವಾಬ್ದಾರಿಯನ್ನು ಪುರಸಭೆಯವರಿಗೆ ವಹಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ರವಿ, ಗ್ರಾಮ ಲೆಕ್ಕಾಧಿಕಾರಿ ಕೊಟ್ರೇಶ್, ಪುರಸಭೆ ಅಧಿಕಾರಿಗಳಾದ ಉಮೇಶ್, ಗುರುಪ್ರಸಾದ್, ನವೀನ್ ಹಾಜರಿದ್ದರು.