ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್
ದಾವಣಗೆರೆ, ಸೆ. 5- ದೇಶದ ಪ್ರಗತಿಗೆ ಶಿಕ್ಷಕರೇ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಪ್ರತಿಪಾದಿಸಿದರು.
ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಉತ್ತಮ ಮೌಲ್ಯ ಹಾಗೂ ಅರಿವುಗಳನ್ನು ಬೆಳೆಸುವ ಶಕ್ತಿ ಶಿಕ್ಷಕರಲ್ಲಿದೆ. ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜಮುಖಿ ಯಾಗಿ ಕೆಲಸ ಮಾಡಬೇಕು. ಆ ಮೂಲಕ ತಮ್ಮ ಕಾರ್ಯವನ್ನು ಬಹಳಷ್ಟು ಶ್ರದ್ಧೆಯಿಂದ ನಿರ್ವಹಿಸಬೇಕು ಎಂದರು.
ಪ್ರಶಸ್ತಿ ಕೇಳಿ ಪಡೆಯದಿರಿ ಪ್ರೊ.ಲಿಂಗಣ್ಣ ಕಿವಿ ಮಾತು
ದಾವಣಗೆರೆ, ಸೆ. 5- ದಯ ಮಾಡಿ ಶಿಕ್ಷಕರು ಕೇಳಿ ಪ್ರಶಸ್ತಿ ಪಡೆಯಬಾರದು ಎಂದು ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆಲವು ಶಿಕ್ಷಕರು ಕೇಳಿ ಪ್ರಶಸ್ತಿ ಪಡೆಯುತ್ತಿದ್ದಾರೆ. ಪ್ರಶಸ್ತಿಗೆ ಆಯ್ಕೆ ಮಾಡುವ ಸಮಿತಿ ಸದಸ್ಯರೂ ಸಹ ಯಾವ ಒತ್ತಡಕ್ಕೂ ಮಣಿಯದೆ, ಶಿಕ್ಷಕರ ಶ್ರಮ, ಸಾಧನೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಬೇಕು ಎಂದು ಸಲಹೆ ನೀಡಿದರು.
ಆರಂಭದ ಶಿಸ್ತು ಅಂತ್ಯದಲ್ಲಿ ಮಾಯ
ಕೊರೊನಾ ಹಿನ್ನೆಲೆಯಲ್ಲಿ ಅಧಿಕಾರಿಗಳ ಸೂಚನೆಯಂತೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಕಡಿಮೆ ಸಂಖ್ಯೆಯ ಶಿಕ್ಷಕರು ಆಗಮಿಸಿದ್ದರು. ಅದರಲ್ಲಿ ಪ್ರಶಸ್ತಿ ಸ್ವೀಕರಿಸಲು ಬಂದ ಶಿಕ್ಷಕರು ಹಾಗೂ ಕುಟುಂಬ ವರ್ಗವೇ ಆಗಿತ್ತು.
ಕಾರ್ಯಕ್ರಮದ ಆರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು, ಶಿಸ್ತಿನಿಂದ ಕುಳಿತಿದ್ದ ಶಿಕ್ಷಕರು ಹಾಗೂ ಕುಟುಂಬ ವರ್ಗದವರು ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ
ಹಿಂದೆ ಗುರು, ಮುಂದೆ ಗುರಿ ಇರಬೇಕು. ಆಗ ಮಾತ್ರ ಜೀವನದಲ್ಲಿ ಏನಾದರೂ ಸಾಧನೆ ಮಾಡಲು ಸಾಧ್ಯ. ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಗುರುವಿನ ಪಾತ್ರ ಹೆಚ್ಚಾಗಿದೆ. ಮಗುವಿಗೆ ಮೊದಲ ಪಾಠಶಾಲೆ ಮನೆ ಹಾಗೂ ತಾಯಿಯೇ ಮೊದಲ ಗುರು ಎಂದು ಹೇಳಿದರು.
ಡಾ.ಸರ್ವಪಳ್ಳಿ ರಾಧಾಕೃಷ್ಣನ್ ಒಬ್ಬ ಶಿಕ್ಷಕರಾಗಿ, ಶಿಕ್ಷಣ ತಜ್ಞರಾಗಿ ನಾಡಿಗೆ ನೀಡಿದ ಕೊಡುಗೆ ಅಪಾರವಾದದ್ದು. ಹಲವಾರು ಹುದ್ದೆ ಗಳನ್ನು ಅಲಂಕರಿಸುವ ಮೂಲಕ ರಾಷ್ಟ್ರ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ದೇಶದ ಘನತೆ ಹೆಚ್ಚಿಸಿದ್ದಾರೆ ಎಂದು ಬಣ್ಣಿಸಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರ ಅನಾವರಣಗೊಳಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್, ಶಿಕ್ಷಕರು ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು. ಮೈಸೂರಿನಂತೆ ದಾವಣಗೆರೆ ಜಿಲ್ಲೆಯೂ ಸಹ ಶಿಕ್ಷಣ ಕ್ಷೇತ್ರಕ್ಕೆ ಹೆಸರುವಾಸಿಯಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಶ್ರದ್ದೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.