ದಾವಣಗೆರೆ, ಸೆ. 7 – ಮಹಾನಗರ ಪಾಲಿಕೆಯ 43ನೇ ವಾರ್ಡಿನ ಸದಸ್ಯರಾದ ಕಲ್ಲಳ್ಳಿ ನಾಗರಾಜ್ ಅವರ ಜನ ಸಂಪರ್ಕ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತರ ಸಭೆ ನಿನ್ನೆ ನಡೆಯಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು.
43ನೇ ವಾರ್ಡಿನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸಿ. ಆರ್. ಜಯಮ್ಮ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅನಿತಾ ಮಾಲತೇಶರಾವ್ ಜಾಧವ್ ಅವರು ನೇಮಕ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಕಲ್ಲಳ್ಳಿ ನಾಗರಾಜ್, ಕೆಪಿಸಿಸಿ ವಕ್ತಾರ
ಡಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ಉತ್ತರ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.