ದಾವಣಗೆರೆ, ಸೆ.12- ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಯುವಜನ ಫೆಡರೇಷನ್ (ಎಐವೈಎಫ್) ಜಿಲ್ಲಾ ಸಮಿತಿ ವತಿಯಿಂದ ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿ ನಂತರ ಮನವಿ ಸಲ್ಲಿಸಿದರು.
ಇತ್ತೀಚೆಗೆ ಹಿಂದಿ ಹಾಗೂ ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆಯಲ್ಲಿ ಶ್ರೀಮಂತ ಕುಟುಂಬಗಳ ವ್ಯಕ್ತಿಗಳು ಭಾಗಿಯಾಗಿರುವುದು ಹೆಚ್ಚಾಗುತ್ತಿದೆ. ಸಿನಿಮಾ ನಟರು, ರಾಜಕಾರಣಿಗಳ ಮಕ್ಕಳು ಸಹ ಭಾಗಿಯಾಗಿರುವ ಬಗ್ಗೆ ನಿತ್ಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಸಮಾಜಕ್ಕೆ ಮಾದರಿಯಾಗಬೇಕಾದವರೇ ಇಂತಹ ಚಟಗಳಿಗೆ ಅಂಟಿಕೊಂಡಿರುವುದು ದುರಂತ. ಇತ್ತೀಚಿನ ಕಾಲೇಜು ಯುವ ಸಮೂಹ ಸಿನಿಮಾ ತಾರೆಯರನ್ನು ಅನುಕರಣೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಆವರಗೆರೆ ವಾಸು, ಜಿಲ್ಲಾಧ್ಯಕ್ಷ ಕೆರನಹಳ್ಳಿ ರಾಜು, ಜಿಲ್ಲಾ ಕಾರ್ಯದರ್ಶಿ ಎ. ತಿಪ್ಪೇಶಿ, ಜಿಲ್ಲಾ ಉಪಾಧ್ಯಕ್ಷ ಫಜುಲುಲ್ಲಾ, ಗದಿಗೇಶ್ ಪಾಳೇದ್, ಇರ್ಫಾನ್, ಹೆಚ್.ಎಂ. ಮಂಜುನಾಥ್, ರುದ್ರೇಶ್ ಮಳಲಕೆರೆ, ಮಂಜುನಾಥ್ ದೊಡ್ಡಮನೆ, ಅಂಜಿನಪ್ಪ ಮಳಲಕೆರೆ, ಲೋಹಿತ್, ತಿಪ್ಪೇಶಿ ಹೊನ್ನೂರು, ಹನುಮಂತಪ್ಪ ಹಾಲೇಕಲ್ಲು, ಪರಶುರಾಮ ಹೆಚ್. ಗುದ್ದಾಳ್, ಆಫ್ರೋಜ್, ಸಂತೋಷ್ ದೊಡ್ಡಮನೆ ಸೇರಿದಂತೆ ಇತರರು ಪಾಲ್ಗೊಂಡಿದ್ದರು.