ದಾವಣಗೆರೆ, ಸೆ.12- ತಾಲ್ಲೂಕಿನ ಆನಗೋಡು ಬಳಿಯ ಸುಲ್ತಾನಿಪುರದ ಕೆರೆ ಮೇಲಿನ ರಸ್ತೆಯನ್ನು ಸುಮಾರು ಒಂದೂವರೆ ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ದಿಪಡಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಏರ್ಪಾಡಾಗಿದ್ದ ಸಮಾರಂಭದಲ್ಲಿ ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಅವರು ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್. ಬಸವಂತಪ್ಪ, ಗುತ್ತಿಗೆದಾರ ಸುರೇಶ್ ಪೈ ಮತ್ತಿತರರು ಉಪಸ್ಥಿತರಿದ್ದರು.
January 12, 2025