ದಾವಣಗೆರೆ, ಸೆ. 17 – ಜಿಲ್ಲಾ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಹುಟ್ಟುಹಬ್ಬ ವನ್ನು ಸಾಮಾಜಿಕ ಕಾರ್ಯಗಳ ಮುಖೇನ ಸರಳವಾಗಿ ಯಾದರೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೋದಿ ಅವರಿಗೆ ಶುಭ ಹಾರೈಸಿ, ಪಕ್ಷದ ಜಿಲ್ಲಾಧ್ಯಕ್ಷ ಹನಗವಾಡಿ ಎಸ್.ಎಂ. ವೀರೇಶ್ ಮತ್ತು ಶಾಸಕ ಎಸ್.ಎ. ರವಿಂದ್ರನಾಥ್ ನೇತೃತ್ವದಲ್ಲಿ ನಿಟುವಳ್ಳಿಯ ಶ್ರೀ ದುರ್ಗಾಂಬಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ವಿದ್ಯಾನಗರ ಉದ್ಯಾನವನದಲ್ಲಿ ಸಸಿ ನೆಟ್ಟು ನೀರೆರೆಯುವ ಮುಖೇನ ಪರಿಸರ ಪ್ರೇಮ ಮೆರೆಯಲಾಯಿತು.
ಹಳೇ ಹೆರಿಗೆ ಆಸ್ಪತ್ರೆ ಮತ್ತು ವೃದ್ಧಾಶ್ರಮಗಳಿಗೆ ತೆರಳಿ ಹಣ್ಣು-ಹಂಪಲು ವಿತರಿಸಿ ಯೋಗ ಕ್ಷೇಮ ವಿಚಾರಿಸಲಾಯಿತು.
ಈ ಸಂದರ್ಭದಲ್ಲಿ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಸುಧಾ ಜಯರುದ್ರೇಶ್, ಡಾ. ಎ.ಹೆಚ್. ಶಿವಯೋಗಿಸ್ವಾಮಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಿವಪ್ರಕಾಶ್, ಉತ್ತರದ ಅಧ್ಯಕ್ಷ ಸಂಗನಗೌಡ್ರು, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತನಾಯ್ಕ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಮಹೇಶ್, ಪುಷ್ಪ ವಾಲಿ, ಪಿ.ಎಸ್. ಬಸವರಾಜ್, ನಾಗರಾಜ್, ಪಿ.ಸಿ. ಶ್ರೀನಿವಾಸ್, ಜಿಲ್ಲಾ ಮಾಧ್ಯಮ ಪ್ರಮುಖ ಹೆಚ್.ಪಿ. ವಿಶ್ವಾಸ್, ಮಂಜಾನಾಯ್ಕ್ ಮತ್ತಿತರರು ಭಾಗವಹಿಸಿದ್ದರು.
ರಕ್ತದಾನ : ಜಿಲ್ಲಾ ಯುವ ಮೋರ್ಚಾದಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ನಗರ ಪಾಲಿಕೆ ಸದಸ್ಯ ಶಿವನಗೌಡ ಟಿ. ಪಾಟೀಲ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರೂ ಆದ ನಗರ ಪಾಲಿಕೆ ಸದಸ್ಯ ಶಿವಪ್ರಕಾಶ್ ಸೇರಿದಂತೆ ಯುವ ಮೋರ್ಚಾ ಕಾರ್ಯಕರ್ತರು ಮತ್ತು ಮಹಿಳಾ ಮೋರ್ಚಾ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಸೇರಿ ಸುಮಾರು 70 ಮಂದಿ ರಕ್ತದಾನ ಮಾಡುವುದರ ಮೂಲಕ ಪ್ರಧಾನಿ ಮೋದಿಯವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಪೂರ್ಣಾವಧಿ ಕಾರ್ಯ ಕರ್ತರಾದ ಗಿರೀಶ್, ಜಿಲ್ಲಾ ಕಾರ್ಯದರ್ಶಿ ಗೋಪಾಲ್ ರಾವ್ ಮಾನೆ, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ಶ್ರೀಕಾಂತ ನೀಲಗುಂದ, ಕೆ.ವಿ. ಗುರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್, ಯಲ್ಲೇಶ್, ಜಿಲ್ಲಾ ಕಾರ್ಯ ದರ್ಶಿ ಪ್ರಶಾಂತ್ ಸೇರಿದಂತೆ ಬಾಪೂಜಿ ಬ್ಲಡ್ ಬ್ಯಾಂಕ್ ಹಾಗೂ ಲೈಫ್ ಲೈನ್ ಬ್ಲಡ್ ಬ್ಯಾಂಕಿನ ಮುಖ್ಯಸ್ಥರಿದ್ದರು.
ಶ್ರಮದಾನ: ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ದಾವಣಗೆರೆ ಉತ್ತರ ವಲಯದಿಂದ ಬಾತಿ ಗ್ರಾಮದಲ್ಲಿ ಸರ್ಕಾರಿ ಶಾಲೆಯನ್ನು ಸ್ವಚ್ಛತೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೃಷ್ಣ ಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದುರ್ಗೇಶ್, ಜಿಲ್ಲಾ ಎಸ್ಟಿ ಮೋರ್ಚಾ ಉತ್ತರ ವಲಯ ಅಧ್ಯಕ್ಷ ದೊಡ್ಡಬಾತಿ ಹನುಮಂತಪ್ಪ ಸೇರಿದಂತೆ ಇತರೆ ಕಾರ್ಯಕರ್ತರು ಇದ್ದರು.