ಮಲೇಬೆನ್ನೂರು, ಜ.29- ಹೊಳೆಸಿರಿಗೆರೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಬಿಳಸನೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಚರಿಸಲಾಯಿತು. ಕಲಿಕಾ ಹಬ್ಬವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನು ಮಂತಪ್ಪ ಮಾತನಾಡಿ, ಕಲಿಕಾ ಹಬ್ಬವು ಕಲಿಕಾ ಚೇತ ರಿಕೆಯ ಭಾಗವಾಗಿದ್ದು, ಮಕ್ಕಳ ಕಲಿಕೆಯನ್ನು ದೃಢೀಕರಿ ಸಲು ರೂಪಿಸಲಾದ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯ ಕೆ.ಆರ್.ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಕವಿತಾ ಜಿ.ಎನ್, ಸದಸ್ಯರಾದ ರಾಜಣ್ಣ ಎ.ಎನ್, ಹನುಮಂತರೆಡ್ಡಿ ಬಿ, ಶ್ರೀಮತಿ ರಶ್ಮಿ ಎಸ್.ಹೆಚ್, ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಸಿ.ಜಯಣ್ಣ, ಕಾರ್ಯದರ್ಶಿ ಬಿ. ಸಿದ್ದರಾಮೇಶ, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಈಶಪ್ಪ ಬೂದಿಹಾಳ್, ಕಾರ್ಯದರ್ಶಿ ಧನ್ಯಕುಮಾರ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಚಂದ್ರಪ್ಪ, ಕಾರ್ಯದರ್ಶಿ ಶರಣಕುಮಾರ ಹೆಗಡೆ, ಮಾಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ. ಉಮೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.
ವಿದ್ಯಾರ್ಥಿನಿ ಅನಸೂಯ ಪ್ರಾರ್ಥಿಸಿದರು. ಶಿಕ್ಷಕ ಪಿ.ಎಚ್.ನಾಗರಾಜ ಸ್ವಾಗತಿಸಿದರು. ಶಿಕ್ಷಕ ಎಸ್.ಶಶಿನಾಯ್ಕ ಕಾರ್ಯಕ್ರಮ ನಿರೂಪಿಸಿದರೆ, ಶಿಕ್ಷಕ ಆರ್.ಗಂಗಾಧರ ವಂದಿಸಿದರು.