ಟಿಕೆಟ್ ಯಾರಿಗೇ ಸಿಗಲಿ ಪಕ್ಷದ ಗೆಲುವಿಗೆ ಶ್ರಮಿಸಿ

ಟಿಕೆಟ್ ಯಾರಿಗೇ ಸಿಗಲಿ ಪಕ್ಷದ ಗೆಲುವಿಗೆ ಶ್ರಮಿಸಿ

ಜಗಳೂರು : ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಎಐಸಿಸಿ‌ ವೀಕ್ಷಕಿ ಪ್ರಣತಿ

ಜಗಳೂರು, ಫೆ.8 – ಕ್ಷೇತ್ರದಲ್ಲಿ ಟಿಕೆಟ್ ಯಾರಿಗೇ ಸಿಗಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲಾ ಮುಖಂಡರು, ಕಾರ್ಯಕರ್ತರು,  ಶ್ರಮಿಸಬೇಕು ಎಂದು ಎಐಸಿಸಿ‌ ವೀಕ್ಷಕಿ, ಮಹಾರಾಷ್ಟ್ರದ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷೆ ಪ್ರಣತಿ ಶಿಂಧೆ ಸಲಹೆ ನೀಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು  ಮುಖಂಡರುಗಳ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಬಿಜೆಪಿ ನೇತೃತ್ವದ ಪ್ರಧಾನಿ ಮೋದಿ ಅವರ ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಠ ಸಮುದಾಯಗಳ ವಿರೋಧಿಯಾಗಿದೆ. ರಾಜ್ಯದಲ್ಲಿ ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರವರಂತಹ ವರಿಷ್ಠರು ನಮ್ಮ ಪಕ್ಷದಲ್ಲಿದ್ದಾರೆ. ಅವರ ಸಲಹೆಗಳಿಗೆ ಕೈಜೋಡಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.

ಕಾಂಗ್ರೇಸ್ ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ, ಜಿಲ್ಲೆಯ ವಿಧಾನ ಕ್ಷೇತ್ರಗಳಲ್ಲಿನ ಕಾಂಗ್ರೇಸ್ ಪಕ್ಷ ಸಂಘಟನೆಯ ವರದಿಯನ್ನು, ಎಐಸಿಸಿಗೆ ಸಲ್ಲಿಸುವ ಹಿನ್ನೆಲೆ ಎಐಸಿಸಿ ವೀಕ್ಷಕರು ಆಗಮಿಸಿದ್ದು, ಕಾರ್ಯಕರ್ತರು ಕಾಂಗ್ರೆಸ್ ಗೆಲುವಿಗೆ ಸಂಕಲ್ಪ ಮಾಡಬೇಕು ಎಂದರು.

ಮಾಜಿ ಶಾಸಕ ಎಚ್.ಪಿ.ರಾಜೇಶ್ ಮಾತನಾಡಿ, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರ ಸಾರಥ್ಯದಲ್ಲಿ ಪ್ರಜಾಧ್ವನಿ ಕಾರ್ಯಕ್ರಮದ ಮೂಲಕ  ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ನಡೆಯುತ್ತಿದೆ. ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಬಲವರ್ಧನೆಗೊಳಿಸೋಣ ಎಂದರು.

ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಗೆಲುವಿಗೆ ಪ್ರಮಾಣ ವಚನ ಮಂಡಿಸಿದರು.ಸಂದರ್ಭದಲ್ಲಿ  ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್ ,  ಮಾಜಿ ಸಚಿವ ಹಾಗೂ ಕ್ಷೇತ್ರ ಉಸ್ತುವಾರಿ ಶಿವಮೂರ್ತಿ ನಾಯ್ಕ, ಕೆಪಿಸಿಸಿ. ಎಸ್. ಟಿ. ಘಟಕದ ಕೆಪಿ. ಪಾಲಯ್ಯ, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರಾದ ಷಂಷೀರ್

ಅಹಮ್ಮದ್, ಎಸ್.ಮಂಜುನಾಥ್, ಕೆಪಿಸಿಸಿ. ಎಸ್. ಟಿ. ಘಟಕದ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ್ರು, ಮಹಿಳಾ ಘಟಕದ ಕೆಂಚಮ್ಮ ಧನ್ಯಕುಮಾರ್, ನಾಗರತ್ನಮ್ಮ, ಸಾವಿತ್ರಮ್ಮ, ಮುಖಂಡರಾದ ಪಲ್ಲಾಗಟ್ಟೆ ಶೇಖರಪ್ಪ, ಸಿ.ತಿಪ್ಪೇಸ್ವಾಮಿ, ಶಂಭುಲಿಂಗಪ್ಪ, ಯರಬಳ್ಳಿ ಉಮಾಪತಿ, ಯು.ಜಿ.ಶಿವಕುಮಾರ್, ಎಸ್.ಕೆ.ರಾಮ ರೆಡ್ಡಿ ಮುಂತಾದವರು ಭಾಗವಹಿಸಿದ್ದರು.

error: Content is protected !!