ದಾವಣಗೆರೆ, ಫೆ. 14 – ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ನಿಂದ ನಗರದ ಸೇವಾದಳ ಕಚೇರಿಯಲ್ಲಿ ಮಾಸಿಕ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ನ ದಾವಣಗೆರೆ ನಗರ ಘಟಕದ ಗೌರವಾಧ್ಯಕ್ಷರಾಗಿ ಎಂ.ಎಸ್. ನಾಗರಾಜಪ್ಪ ಮೆಳ್ಳೇಕಟ್ಟೆ ಅವರನ್ನು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಅವರು ನೇಮಿಸಿ ಆದೇಶ ಪತ್ರ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಎನ್.ಎಸ್. ರಾಜು, ನಗರ ಘಟಕದ ಅಧ್ಯಕ್ಷ ಎಂ.ಪರಮೇಶ್ವರಪ್ಪ ಸಿರಿಗೆರೆ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಕುರುಡಿ ಅರುಣಕುಮಾರ್ ಮತ್ತು ಲಾಯರ್ ಯೋಗೀಶ್ ಅವರನ್ನು ಕಾರ್ಯಕಾರಿ ಸಮಿತಿಗೆ ಸೇರ್ಪಡೆ ಮಾಡಲಾಯಿತು. ಬಿ.ಎಂ ಮಲ್ಲಿಕಾರ್ಜುನ ಸ್ವಾಮಿ, ಸೌಮ್ಯ ಸತೀಶ್ ಶರಣರ ವಚನ ಗಾಯನ ನಡೆಸಿಕೊಟ್ಟರು.