ದಾವಣಗೆರೆ,ಫೆ.16- ನಗರದ ಶ್ರೀ ಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿ ವರಾತ್ರಿ ಪ್ರಯುಕ್ತ ನಾಡಿದ್ದು ದಿನಾಂಕ 18ರ ಶನಿವಾರ ಶ್ರೀ ಸ್ವಾಮಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗಿದೆ. ಶನಿವಾರ ಮುಂಜಾನೆ ಶ್ರೀ ಲಿಂಗೇಶ್ವರ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮತ್ತು ಪೂಜೆಗಳು ನಡೆಯಲಿವೆ ಎಂದು ದೇವಸ್ಥಾನ ಸಮಿತಿ ಕಾರ್ಯದರ್ಶಿ ಕಿರುವಾಡಿ ವಿ.ಸೋಮಶೇಖರ್ ತಿಳಿಸಿದ್ದಾರೆ.
ಶ್ರೀ ಲಿಂಗೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಶನಿವಾರ ಇಡೀ ದಿನವೂ ಸಹಸ್ರ ಲಿಂಗ ದರ್ಶನದ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಅಲ್ಲದೇ, ಶನಿವಾರ ರಾತ್ರಿ 11 ಗಂಟೆಗೆ ನಮನ ಅಕಾಡೆಮಿಯಿಂದ ಶಿವ ಸ್ಮರಣೆಯ ನೃತ್ಯ ಪ್ರದರ್ಶನ ಆಯೋಜನೆಗೊಂಡಿದೆ.