ಹರಿಹರದಲ್ಲಿ ಸರ್ಕಾರಿ ನೌಕರರ ಮುಷ್ಕರ

ಹರಿಹರದಲ್ಲಿ ಸರ್ಕಾರಿ ನೌಕರರ ಮುಷ್ಕರ

ಹರಿಹರ, ಫೆ. 23 – ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆ ಹರಿಹರ ವತಿಯಿಂದ ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರವನ್ನು ಆಗ್ರಹಿಸಿ ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲಾ ಗುವುದು ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ‌.ಕೆ. ಭೂಮೇಶ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಅಧಿಕಾರಿ ಮತ್ತು ನೌಕರರು ಮತ್ತು ಸರ್ಕಾರದ ಅಧೀನಕ್ಕೆ ಒಳಪಡುವ ನೌಕರರು ಕಾಲ ಕಾಲಕ್ಕೆ ವೇತನ ಹಾಗೂ ಭತ್ಯೆಗಳನ್ನು ಪರಿಷ್ಕರಣೆಯೊಂದಿಗೆ ಪಡೆಯುವುದು ಅವರ ಮೂಲಭೂತ ನ್ಯಾಯ ಸಮ್ಮತ ಹಕ್ಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಮುಖಂಡರಾದ ಅಂಗಡಿ ಮಲ್ಲಿಕಾರ್ಜುನ, ಈಶಪ್ಪ ಬೂದಿಹಾಳ, ರೇವಣಸಿದ್ದಪ್ಪ ಅಂಗಡಿ, ಶರಣ್ ಕುಮಾರ್ ಹೆಗಡೆ, ವಿಜಯ ಮಹಾಂತೇಶ್, ಪ್ರಕಾಶ್, ಉಮ್ಮಣ್ಣ, ರಾಧಾ, ಶಿವಕುಮಾರ್, ಬಿ.ಹೆಚ್. ಮಂಜುನಾಥ್, ಪ್ರಹ್ಲಾದ್ ಮತ್ತಿತರರು ಹಾಜರಿದ್ದರು.

error: Content is protected !!