81 ಲಕ್ಷ ರೂ. ಲಂಚಕ್ಕೆ ಬೇಡಿಕೆ 40 ಲಕ್ಷ ರೂ. ಪಡೆಯುವಾಗ ಲೋಕಾಯುಕ್ತರಿಂದ ಬಲೆ
ಬೆಂಗಳೂರು, ಮಾ.2- ಚನ್ನಗಿರಿ ಶಾಸಕರೂ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತದ ಅಧ್ಯಕ್ಷರೂ ಆಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.
ಕೆಎಸ್ ಡಿಎಲ್ಗೆ ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು 40 ಲಕ್ಷ ರೂ. ಲಂಚ ಪಡೆಯುವಾಗ ಅವರು ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
1.62 ಕೋಟಿ ರೂ. ಪತ್ತೆ
ದಾಳಿಯ ವೇಳೆ ಇಡೀ ಕಚೇರಿಯನ್ನು ಶೋಧಿಸಿದಾಗ 1.62 ಕೋಟಿ ರೂ.ಗಳು ದೊರೆತಿವೆ. ಇನ್ನೂ ಶೋಧ ಕಾರ್ಯ ಮುಂದುವರೆದಿದೆ ಎಂದು ಲೋಕಾಯುಕ್ತ ಐಜಿಪಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ತಿಳಿಸಿದ್ದಾರೆ.
ಟೆಂಡರ್ ಸಂಬಂಧ ಖಾಸಗಿ ವ್ಯಕ್ತಿಯೊಬ್ಬರು ಗುರುವಾರ ಬೆಳಗ್ಗೆ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಎಫ್.ಐ.ಆರ್. ದಾಖಲಿಸಿ ದಾಳಿ ಮಾಡಲಾಗಿದೆ ಎಂದರು ರಾವ್.
ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪಾತ್ರ ಇರುವ ಬಗ್ಗೆ ಇನ್ನೂ ತನಿಖೆ ನಡೆಸಬೇಕಿದೆ. ತನಿಖೆ ಈಗ ಪ್ರಾಥಮಿಕ ಹಂತದಲ್ಲಿದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ. ತಂದೆಯ ಪರವಾಗಿ ಬೆಂಗಳೂರಿನ ಕ್ರೆಸಂಟ್ ರಸ್ತೆಯಲ್ಲಿನ ಶಾಸಕರ ಖಾಸಗಿ ಕಚೇರಿಯಲ್ಲಿ ಸಂಜೆ 6.45ರ ಸುಮಾರಿಗೆ ಲಂಚ ಸ್ವೀಕರಿಸುತ್ತಿದ್ದಾಗ ನೋಟಿನ ಕಂತೆ ತುಂಬಿದ ಮೂರು ಬ್ಯಾಗ್ಗಳನ್ನು ಲೋಕಾಯುಕ್ತರು ವಶ ಪಡಿಸಿಕೊಂಡಿದ್ದಾರೆ.
ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ.
ಕೆಎಸ್ಡಿಎಲ್ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ ಮಾಡಾಳ್ ವಿರೂಪಾಕ್ಷಪ್ಪ