ಸಾಹಿತಿ ಸುಕನ್ಯಾ ತ್ಯಾವಣಿಗಿ ಅವರಿಗೆ `ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

ಸಾಹಿತಿ ಸುಕನ್ಯಾ ತ್ಯಾವಣಿಗಿ ಅವರಿಗೆ `ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

ದಾವಣಗೆರೆ, ಮಾ.8- ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಲ್ಲಿಸುತ್ತಿರುವ ಅನುಪಮ ಸೇವೆಗೆ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೊಡಮಾಡುವ `ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿಗೆ ನಗರದ ಹಿರಿಯ ಸಾಹಿತಿ ಶ್ರೀಮತಿ ಸುಕನ್ಯಾ ತ್ಯಾವಣಿಗಿ ಭಾಜನರಾಗಿ ದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಕನ್ಯಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ 8 ಮಂದಿ, ಕಲಾ ಕ್ಷೇತ್ರದಲ್ಲಿ 5 ಮಂದಿ, ಕ್ರೀಡಾ ಕ್ಷೇತ್ರದಲ್ಲಿ ಇಬ್ಬರು, ಸಾಹಿತ್ಯ ಕ್ಷೇತ್ರದಲ್ಲಿ ಮೂವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯು ತಲಾ 25 ಸಾವಿರ ರೂ. ನಗದು, ಫಲಕ ಹೊಂದಿದೆ. 6 ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು, ಫಲಕ ಹೊಂದಿದೆ.

error: Content is protected !!