ದಾವಣಗೆರೆ, ಮಾ.10- ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಸಕ್ತ ಶೈಕ್ಷಣಿಕ ವರ್ಷದ ವೇದಿಕೆ ಉದ್ಘಾಟನೆ ಕಾರ್ಯಕ್ರಮವನ್ನು ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.
ಪ್ರಾಂಶುಪಾಲ ಡಾ. ಡಿ.ಬಿ. ಗಣೇಶ್, ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ರಾಹುಲ್ ಪಟೇಲ್, ಮುಖ್ಯ ಅತಿಥಿಗಳಾದ ಸಿಟಿ ಕಾರ್ಪೊರೇಷನ್ ಕಾರ್ಯಪಾಲಕ ಇಂಜಿನಿಯರ್ ಎಂ.ಎನ್. ಹರ್ಷಿತ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ (ಹರಿಹರ) ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಟಿ.ಎಂ. ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು.
ವಿಶೇಷ ಅತಿಥಿಗಳಾಗಿ ವಿಭಾಗದ ಹಳೆಯ ವಿದ್ಯಾರ್ಥಿ ಆಸ್ಟ್ರೇಲಿಯಾದ ಸಿವಿಲ್ ಡಿಸೈಜನ್ ಇಂಜಿನಿಯರ್ ಚರಣ್‌ರಾಜ್ ಹಾಗೂ ಪಿಡಬ್ಲ್ಯೂಡಿ ಸಹಾಯಕ ಇಂಜಿನಿಯರ್ ಎಂ. ತನುಜಾ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಧ್ಯಾಪಕ ಪದಾಧಿಕಾರಿಗಳಾದ ಎಂ.ಎಸ್. ಕಿರಣ್ ಕುಮಾರ್ ಮತ್ತು ಕೆ.ಎಸ್. ಹರೀಶ್ ಹಾಗೂ ಇತರರು ಉಪಸ್ಥಿತರಿದ್ದರು.